ಫೆಬ್ರವರಿ 28 ರಂದು ನೋಯ್ಡಾದಲ್ಲಿ ಖಾಸಗಿ ವಾಹಿನಿಯೊಂದರ ಸುದ್ದಿ ಚರ್ಚಾ ಕಾರ್ಯಕ್ರಮವೊಂದರಲ್ಲಿ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಸಿಂಗ್ ಆರೋಪಿಸಿದ್ದರು. ಕೇಸರಿ ಧರಿಸಿದ ಕೆಲವರು ನ್ಯೂಸ್ ರೂಮ್‌ಗೆ ಬಂದು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದರು ಮತ್ತು ದೊಣ್ಣೆಗಳಿಂದ ಹೊಡೆದರು ಎಂದು ಆರೋಪಿಸಿದ್ದ ಕೆಲವೇ ದಿನಗಳಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.
ಖಾಸಗಿ ವಾಹಿನಿ ಸಂದರ್ಶನ ವೇಳೆ ಐಐಟಿ ಬಾಬಾ ಮೇಲೆ ಹಲ್ಲೆ
‘ಐಐಟಿ ಬಾಬಾ’ ಅಲಿಯಾಸ್ ಅಭಯ್ ಸಿಂಗ್, ನೋಯ್ಡಾದಲ್ಲಿ ಖಾಸಗಿ ಚಾನೆಲ್‌ವೊಂದರ ಚರ್ಚೆಯಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದ್ದರು. ಕೇಸರಿ ಬಟ್ಟೆ ಧರಿಸಿದ ಕೆಲವು ಜನರು ಸುದ್ದಿವಾಹಿನಿಯ ಕೊಠಡಿಗೆ ಬಂದು ತನ್ನೊಂದಿಗೆ ಅನುಚಿತವಾಗಿ ವರ್ತಿಸಿ, ಕೋಲುಗಳಿಂದ ಹೊಡೆದಿದ್ದಾರೆ ಎಂದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಐಐಟಿ ಬಾಬಾ ಸೆಕ್ಟರ್ 126ರ ಪೊಲೀಸ್ ಹೊರಠಾಣೆ ಹೊರಗೆ ಕುಳಿತು ಪ್ರತಿಭಟನೆ ನಡೆಸಿದ್ದರು. ಪೊಲೀಸರು ಅವರ ಮನವೊಲಿಸಿದ ನಂತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ ಮಾಡಿದ್ದಾರೆ.
‘ಐಐಟಿ ಬಾಬಾ’ ಅವರು ನೋಯ್ಡಾದ ಖಾಸಗಿ ಸುದ್ದಿವಾಹಿನಿಯೊಂದಕ್ಕೆ ಚರ್ಚೆಯಲ್ಲಿ ಭಾಗವಹಿಸಲು ಭೇಟಿ ನೀಡಿದ್ದರು. ಈ ಸಮಯದಲ್ಲಿ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಐಐಟಿ ಬಾಬಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಲೈವ್‌ನಲ್ಲಿ ಪೂರ್ಣ ಘಟನೆಯನ್ನು ವಿವರಿಸಿದ್ದಾರೆ. ಹಲ್ಲೆಗೆ ಸಂಬಂಧಿಸಿದಂತೆ ಅವರು ಪೊಲೀಸರಿಗೆ ಸಲ್ಲಿಸಿದ ದೂರಿನ ಪತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
‘‘ಐಐಟಿ ಬಾಬಾ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಕೆಲವು ಸಂತರು ಕೂಡ ಉಪಸ್ಥಿತರಿದ್ದರು. ಚಾನೆಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ, ಬಾಬಾ ಯಾರೊಂದಿಗೋ ಮೊಬೈಲ್‌ನಲ್ಲಿ ಮಾತನಾಡುತ್ತಾ ಕಾರ್ಯಕ್ರಮದಿಂದ ಹೊರನಡೆಯಲು ಯತ್ನಿಸುತ್ತಿರುವುದು ಕಂಡುಬಂದಿದೆ. ಈ ವೇಳೆ ವಾಹಿನಿಯವರು ತನ್ನನ್ನು ಕೂಡಿಹಾಕಿದ್ದಾರೆ ಎಂದು ಐಐಟಿ ಬಾಬಾ ಆರೋಪಿಸಿದ್ದಾರೆ,’’ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಹಾಕುಂಭ ಸಂದರ್ಭದಲ್ಲಿ ಮೊದಲ ಬಾರಿಗೆ ಸಾರ್ವಜನಿಕರ ಗಮನ ಸೆಳೆದ ಏರೋಸ್ಪೇಸ್ ಎಂಜಿನಿಯರ್ ಆಗಿದ್ದ ಅಭಯ್ ಸಿಂಗ್, ಐಐಟಿಯಿಂದ ಪದವಿ ಪಡೆದುಕೊಂಡಿದ್ದಾರೆ. ಬಳಿಕ ಅವರು ಸನ್ಯಾಸ ಸ್ವೀಕರಿಸಿದ್ದರು.
Read more
[wpas_products keywords=”deal of the day sale today offer all”]