ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಮಾತನಾಡಿ, “ಸಾಮಾನ್ಯವಾಗಿ ವಲಸೆ ಹಕ್ಕಿಗಳು ವಂಶಾಭಿವೃದ್ಧಿಗೆ ಬಂದಾಗ ಹಿಕ್ಕೆ, ಪುಕ್ಕ ಹಾಗೂ ಬಾಯಿ ಮತ್ತು ಕಣ್ಣಿನಿಂದ ಹೊರ ಬರುವ ಸ್ರವಿಕೆಯಿಂದ ಕಾಯಿಲೆ ಹರಡು ಸಂಭವವಿದ್ದು, ಪಕ್ಷಿಗಳಿಗೆ ರೋಗವು ಹರಡುತ್ತದೆ. ಮನುಷ್ಯರಿಗಲ್ಲ ” ಎಂದು ತಿಳಿಸಿದರು.
ಮಾಂಸ ಬೇಯಿಸಿ ಸೇವಿಸಿ
ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು 70 ಡಿಗ್ರಿ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಬೇಯಿಸಿದಾಗ ವೈರಾಣು ನಾಶಗೊಳ್ಳುತ್ತದೆ. ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿದ ನಂತರ ಸೇವಿಸಬೇಕು ಎಂದರು.
ಬಳ್ಳಾರಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಫೆ.23 ರಂದು ಕುರೇಕುಪ್ಪ ಕುಕ್ಕುಟ ಸಂವರ್ಧನಾ ಕೇಂದ್ರದಲ್ಲಿ ಮಾಡಿದ ಅಸಿಲ್ ಮತ್ತು ಕಾವೇರಿ ತಳಿ ಕೋಳಿಗಳಿಗೆ ಕೋಳಿ ಶೀತ ಜ್ವರ ರೋಗದ ಲಕ್ಷಣ ಕಂಡುಬಂದು ಕೆಲವು ಕೋಳಿಗಳು ಮರಣ ಹೊಂದಿದ್ದವು. ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿನ ಐಎಎಚ್ ಮತ್ತು ವಿಬಿಗೆ ಮರಣ ಹೊಂದಿದ ಕೋಳಿಗಳ ಮಾದರಿ ಕಳುಹಿಸಲಾಗಿತ್ತು. ಫೆ.25 ರಂದು ಭೋಪಾಲ್‌ನ ಐಸಿಆರ್‌ನ- ರಾಷ್ಟ್ರೀಯ ಹೈ ಸೆಕ್ಯುರಿಟಿ ಪ್ರಾಣಿ ರೋಗಗಳ ಪ್ರಯೋಗಾಲಯ ಸಂಸ್ಥೆಯಿಂದ ರೋಗ ದೃಢೀಕರಣವಾಗಿರುವ ವರದಿ ಬಂದ ನಂತರ ಕೋಳಿ ಶೀತ ಜ್ವರ ರೋಗದ ಬಗ್ಗೆ ಘೋಷಿಸಲಾಯಿತು. ಆಗ ಮಾರ್ಗಸೂಚಿಯಂತೆ ಇರುವ 2400 ಕೋಳಿಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ ಎಂದರು.
ಅಧಿಕಾರಿ ಮತ್ತು ಸಿಬ್ಬಂದಿಗೆ ತರಬೇತಿ
ಬೆಂಗಳೂರಿನ ಐಎಎಚ್ ಮತ್ತು ವಿಬಿ ಪ್ರಯೋಗಾಲಯದ ವಿಜ್ಞಾನಿಗಳು ಮತ್ತು ಪಶುಪಾಲನಾ ಇಲಾಖೆಯ ನಿರ್ದೇಶಕರು ಭೇಟಿ ನೀಡಿ ಹಕ್ಕಿ ಜ್ವರದ ನಿಯಂತ್ರಣ ಮಾರ್ಗಸೂಚಿಯಂತೆ ಕಟ್ಟೆಚ್ಚರ ವಹಿಸಲು ಪಶುಪಾಲನಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ತುರ್ತು ಸಂದರ್ಭದಲ್ಲಿತ್ವರಿತವಾಗಿ ಕ್ರಮ ಜರುಗಿಸಲು ಪಶುವೈದ್ಯಾಧಿಕಾರಿಗಳ ನೇತೃತ್ವದಲ್ಲಿ13 ಕ್ಷೀಪ್ರ ಪ್ರತಿಕ್ರಿಯೆ ತಂಡ ರಚಿಸಲಾಗಿದೆ ಎಂದರು.
ಅರಿವು ಮೂಡಿಸಲು ನಿರ್ದೇಶನ
ಬಳ್ಳಾರಿ ಜಿಲ್ಲೆಯಲ್ಲಿಕೋಳಿ ಶೀತ ಜ್ವರದ ಬಗ್ಗೆ ಸಾರ್ವಜನಿಕರಲ್ಲಿಅರಿವು ಮೂಡಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕೋಳಿ ಸಾಕಣೆ ಕೇಂದ್ರಗಳ ಮಾಲೀಕರಿಗೆ ಕೋಳಿಗಳಲ್ಲಿಅಸಹಜ ಸಾವು ಕಂಡು ಬಂದಲ್ಲಿತಕ್ಷಣವೇ ಪಶು ಪಾಲನಾ ಇಲಾಖೆಗೆ ತಿಳಿಸುವಂತೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಬರುವ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟ ಅಂಗಡಿಗಳಲ್ಲಿಉತ್ಪಾದನೆಯಾಗುವ ತ್ಯಾಜ್ಯಗಳನ್ನು ಸೂಕ್ತ ರೀತಿಯಲ್ಲಿವಿಲೇವಾರಿ ಮಾಡಲು ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕೋಳಿ ಮೊಟ್ಟೆ ಸೇವಿಸಲು ನಿರ್ಬಂಧ ಇಲ್ಲ
ಧಾರವಾಡ ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ.ರವಿ ಸಾಲಿಗೌಡರ ಈ ಬಗ್ಗೆ ಮಾತನಾಡಿದ್ದು, ಇದು ಇನ್ಫೂಯನ್ಸ್ ವೈರಸ್ (ಎಚ್5 ಎನ್ 1) ಸೋಂಕು. ಕೋಳಿಗಳಿಂದ ಮನುಷ್ಯರಿಗೆ ಈ ವೈರಸ್ ಹರಡುವ ಸಂಭವ ಇರುವುದಿಲ್ಲ.ಕೋಳಿ ಮತ್ತು ಮೊಟ್ಟೆಯನ್ನು ಸೇವಿಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಆದರೆ ಮೊಟ್ಟೆ ಮತ್ತು ಕೋಳಿ ಮಾಂಸವನ್ನು ಚೆನ್ನಾಗಿ ಬೇಯಿಸಿ ಆಹಾರವಾಗಿ ಉಪಯೋಗಿಸಬಹುದು. ಭಾರತೀಯ ಅಡುಗೆ ಪದ್ಧತಿಯಲ್ಲಿ ಈ ವೈರಸ್ ಜೀವಂತವಾಗಿರಲು ಸಾಧ್ಯವಿರುವುದಿಲ್ಲ. ಹಾಗಾಗಿ ಸಾರ್ವಜನಿಕರು ಕೋಳಿ ಶೀತ ಜ್ವರದ ಬಗ್ಗೆ ಹೆಚ್ಚಿನ ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.
Read more
[wpas_products keywords=”deal of the day sale today offer all”]