Source : Online Desk
ಬೆಂಗಳೂರು: ಭಾಷೆ ಮತ್ತು ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದು ಸಿದ್ದರಾಮಯ್ಯ ಪರಿಸ್ಥಿತಿ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ ಎಂದು ಬಿಜೆಪಿ ಟೀಕಿಸಿದೆ.
ಭಾಷೆ ಹಾಗೂ ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು @INCKarnataka ಹವಣಿಸುತ್ತಿದೆ.
ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ “ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ” ಎಂದು @siddaramaiah ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ.#ನಾಡದ್ರೋಹಿಕಾಂಗ್ರೆಸ್
— BJP Karnataka (@BJP4Karnataka) December 19, 2021
ಈ ಕುರಿತು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡಲಾಗಿದ್ದು, ಭಾಷೆ ಹಾಗೂ ಸ್ವಾತಂತ್ರ್ಯ ವೀರರಿಗೆ ಅಪಮಾನ ಮಾಡುವ ಷಡ್ಯಂತ ಕಾಂಗ್ರೆಸ್ ವಾರ್ ರೂಮಿನಲ್ಲೇ ರೂಪುಗೊಂಡಿದ್ದು? ಡಿಕೆ ಶಿವಕುಮಾರ್ ಅವರೇ, ನಿಮ್ಮ ಹೋರಾಟಕ್ಕೆ ಜನ ಬೆಂಬಲ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ರೂಪಿಸುತ್ತಿದ್ದೀರಾ? ಎಂದು ಪ್ರಶ್ನಿಸಿದೆ.
ಮಹಾರಾಷ್ಟ್ರದಲ್ಲಿ ಪುಂಡರೊಂದಿಗೆ ಸೇರಿಕೊಂಡು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು, ರಾಯಣ್ಣ ಪ್ರತಿಮೆಗೆ ಅಪಮಾನ ಮಾಡಿದ್ದು, ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್, ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು, ಶಾಂತಿ ಕದಡುವುದೇ ಕಾಂಗ್ರೆಸ್ ಉದ್ದೇಶವಾಗಿದೆ ಎಂದು ಆರೋಪಿಸಿದೆ.