Karnataka news paper

ಜಮ್ಮು ಮತ್ತು ಕಾಶ್ಮೀರ: ಯೋಧರ ಗುಂಡಿಗೆ ಉಗ್ರ ಹತ, ಎನ್ಕೌಂಟರ್ ಮುಂದುವರಿಕೆ


Source : ANI

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧರ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ತಡರಾತ್ರಿ ಮತ್ತೋರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಭಾನುವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ ನಡೆದಿದ್ದು, ಈ ವೇಳೆ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಶ್ರೀನಗರದ ಹರ್ವಾನ್ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆದಿದ್ದು, ಘಟನಾ ಪ್ರದೇಶವನ್ನು ಸುತ್ತುವರೆದಿರುವ ಸೇನೆ ಕಾರ್ಯಾಚರಣೆ ಮುಂದುವರೆಸಿದೆ. ಅಲ್ಲದೆ ಸುತ್ತಮುತ್ತಲ ಪ್ರದೇಶದಲ್ಲಿ ತೀವ್ರ ಶೋಧ ನಡೆಸಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ. 
 





Read more