Source : Online Desk
ಕೊಟ್ಟಾಯಂ: ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಸಾವು ಸಂಭವಿಸಿಲ್ಲ.
ಆಸ್ಪತ್ರೆಯ ಹಿಂಬದಿಯಲ್ಲಿದ್ದ ತ್ಯಾಜ್ಯ ರಾಶಿಗೆ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ.
ಇದನ್ನು ಓದಿ: ಕೇರಳ: ನಿನ್ನೆ ಪ್ರೀತಿ ನಿರಾಕರಿಸಿದ ಯುವತಿ ಹತ್ಯೆ ಮಾಡಿದ್ದ ಭಗ್ನಪ್ರೇಮಿ ಇಂದು ಚಿಕಿತ್ಸೆ ಫಲಿಸದೆ ಸಾವು
ಬೃಹತ್ ಪ್ರಮಾಣದ ಹೊಗೆ ಹೊರಬರುತ್ತಿರುವುದನ್ನು ನೋಡಿದ ಸಿಬ್ಬಂದಿ ಅಲ್ಲಿಂದ ತಕ್ಷಣವೇ ಬೇರೆ ಕಡೆ ಹೋಗಿದ್ದಾರೆ. ಸಿಬ್ಬಂದಿಯ ಬ್ಯಾಗ್ ಸೇರಿದಂತೆ ಎಲ್ಲವೂ ಬೆಂಕಿಗೆ ಆಹುತಿಯಾಗಿದೆ.
ಇಂದು ಮಧ್ಯಾಹ್ನ 2.30ಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಈ ಸ್ಥಳದಲ್ಲಿ ತ್ಯಾಜ್ಯವನ್ನು ಮತ್ತು ಪ್ಲಾಸ್ಟಿಕ್ ಕವರ್ಗಳನ್ನು ಸಂಗ್ರಹಿಸಿಡಲಾಗಿತ್ತು.
ಎರಡು ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಪ್ರಯತ್ನಿಸುತ್ತಿವೆ.