Source : PTI
ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ಭಾನುವಾರ ಇಲ್ಲಿನ ಅಪಾರ್ಟ್‌ಮೆಂಟ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸೋಮವಾರ ಪೊಲೀಸ್ ಮೂಲಗಳು ತಿಳಿಸಿವೆ.
ಮೃತರನ್ನು ಬೀದರ್ ಮೂಲದ ವೈಶಾಲಿ ಗಾಯಕವಾಡ(25) ಎಂದು ಗುರುತಿಸಲಾಗಿದೆ.
ಇಲ್ಲಿಗೆ ಸಮೀಪದ ಕುಥಾರ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಆಕೆ ತನ್ನ ಸ್ನೇಹಿತೆಯೊಂದಿಗೆ ವಾಸವಿದ್ದರು ಮತ್ತು ಇಬ್ಬರೂ ಪ್ರತ್ಯೇಕ ಕೊಠಡಿಗಳಲ್ಲಿ ತಂಗಿದ್ದರು.
ಇದನ್ನು ಓದಿ: ದಕ್ಷಿಣ ಕನ್ನಡ: ಗೋಡೆ ಕುಸಿದು ಇಬ್ಬರು ಮಹಿಳಾ ಕಾರ್ಮಿಕರು ಸಾವು
ಸ್ನೇಹಿತೆ ಆಕೆಗೆ ದೂರವಾಣಿ ಕರೆ ಮಾಡಿದಾಗ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದಾಗ ಘಟನೆ ಬೆಳಕಿಗೆ ಬಂದಿದೆ.
ವೈಶಾಲಿ ತನ್ನ ಕೊಠಡಿಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ
ವೈಯಕ್ತಿಕ ಸಮಸ್ಯೆಗಳೇ ಕಾರಣವಾಗಿರಬಹುದು ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.