ನವದೆಹಲಿ: ಕಬೀರ್ ಖಾನ್ ನಿರ್ದೇಶನದ ಬಹುನಿರೀಕ್ಷಿತ ’83‘ ಚಿತ್ರಕ್ಕೆ ಯಾವುದೇ ತೆರಿಗೆಯನ್ನು ವಿಧಿಸುವುದಿಲ್ಲ ಎಂದು ದೆಹಲಿ ಸರ್ಕಾರ ಘೋಷಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ರಿಲಯನ್ಸ್ ಎಂಟರ್‌ಟೈನ್‌ಮೆಂಟ್ ಗ್ರೂಪ್‌ನ ಸಿಇಒ ಶಿಬಾಶಿಶ್ ಸರ್ಕಾರ್, ‘ದೆಹಲಿಯಲ್ಲಿ 83 ಚಿತ್ರವು ತೆರಿಗೆ ಮುಕ್ತ ಎಂದು ಘೋಷಿಸಲಾಗಿದೆ. ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಅವರಿಗೆ ಧನ್ಯವಾದಗಳು‘ ಎಂದು ತಿಳಿಸಿದ್ದಾರೆ.
ಕಪಿಲ್ ದೇವ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ರೋಚಕ ಕಥೆಯನ್ನು ಹೊಂದಿರುವ ‘83‘ ಚಿತ್ರವು ಶುಕ್ರವಾರ(ಡಿಸೆಂಬರ್ 24) ಬಿಡುಗಡೆಯಾಗಲಿದೆ. ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ‘83‘ ತೆರೆಕಾಣಲಿದೆ.
ಕಪಿಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ಹಾಗೂ ಕಪಿಲ್ ದೇವ್ ಅವರ ಪತ್ನಿ ರೋಮಿ ದೇವ್ ಪಾತ್ರದಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದಾರೆ.