ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 27 ಮತ್ತು 28 ರಂದು ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿಗಳು ಈ ಆದೇಶ ಹೊರಡಿಸಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಾರ್ವಜನಿಕರು ನದಿ, ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
ಹೈಲೈಟ್ಸ್:
ಕರಾವಳಿಯಲ್ಲಿ ಭಾರೀ ಮಳೆ ಹಿನ್ನೆಲೆ ಹವಾಮಾನ ಇಲಾಖೆಯು ರೆಡ್ ಅಲರ್ಟ್.
ಮೇ 27 ಹಾಗೂ 28 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ.