Karnataka news paper

PBKS Vs MI – ಬಲಾಢ್ಯ ಮುಂಬೈಗೆ ಜೋಶ್ ಇಂಗ್ಲಿಸ್ ಪಾಠ: ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಪಂಜಾಬ್ ಕಿಂಗ್ಸ್ ನೆಗೆತ


ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ 7 ವಿಕೆಟ್‌ಗಳ ಅಧಿಕಾರಯುತ ಜಯ ಗಳಿಸಿದ ಶ್ರೇಯಸ್ ಅಯ್ಯರ್ ನೇತೃತ್ವದ ಪಂಜಾಬ್ ಕಿಂಗ್ಸ್ ಐಪಿಎಲ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಪ್ರಿಕೇರಿದೆ. ಜೋಶ್ ಇಂಗ್ಲಿಸ್ ಮತ್ತು ಪ್ರಿಯಾಂಶ್ ಆರ್ಯ ಅವರ ಆರ್ಭಟದಿಂದಾಗಿ ಪಂಜಾಬ್ ಕಿಂಗ್ಸ್ ತಂಡ ಇನ್ನೂ 9 ಎಸೆತಗಳು ಉಳಿದಿರುವಂತೆ ಜಯಭೇರಿ ಬಾರಿಸಿತು. ಈ ಸೋಲಿನೊಂದಿಗೆ ಹಾರ್ದಿಕ್ ಪಾಂಡ್ಯ ಬಳಗ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಿದೆ. ಲಖನೌ ಮತ್ತು ರಾಯಲ್ ಚಾಲೆಂಜರ್ಸ್ ನಡುವೆ ಮಂಗಳವಾರ ನಡೆಯಲಿರುವ ಪಂದ್ಯವು ಅಗ್ರ 3 ಸ್ಥಾನಿಗಳನ್ನು ನಿರ್ಧರಿಸಲಿದೆ.

ಹೈಲೈಟ್ಸ್‌:

  • ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಗಳ ಅಂತರದಿಂದ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ ಪಂಜಾಬ್ ಕಿಂಗ್ಸ್
  • ಪ್ರಿಯಾಂಶ್ ಆರ್ಯ ಮತ್ತು ಜೋಶ್ ಇಂಗ್ಲಿಷ್ ಶತಕದ ಜೊತೆಯಾಟದಿಂದ ಪಂಜಾಬ್ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.
  • ಅಂತಿಮ ಪಂದ್ಯದಲ್ಲಿ ಸೋಲನುಭವಿಸಿದ ಬಲಾಢ್ಯ ಮುಂಬೈ ಇಂಡಿಯನ್ಸ್ ತಂಡ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.



Source link