The New Indian Express
ಕಲಬುರಗಿ: ಮಹಾರಾಷ್ಟ್ರಕ್ಕೆ ತೆರೆಳುತ್ತಿದ್ದ ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗಳ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದೆ.
ರಾಜ್ಯದ ಸಾರಿಗೆ ಬಸ್ ಗಳನ್ನು ವಿರೂಪಗೊಳಿಸಿದ ಹಿನ್ನೆಲೆಯಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಕೆಕೆಆರ್ ಟಿಸಿ ಮ್ಯಾನೇಜರ್ ಸಂತೋಷ್ ಕುಮಾರ್ ತಿಳಿಸಿದ್ದಾರೆ.
ಕೆಕೆಎಸ್ ಆರ್ ಟಿಸಿ ಬಸ್ ಗಳ ಮೇಲೆ ಜೈ ಶಿವಾಜಿ ಎಂದು ಬರೆದು ಕಪ್ಪು ಮಸಿ ಬಳಿಯುತ್ತಿದ್ದ ಕಾರಣ ಕೆಕೆಎಸ್ ಆರ್ ಟಿಸಿ ಬಸ್ ಸಿಬ್ಬಂದಿ ಮತ್ತು ಪ್ರಯಾಣಿಕರು ಭಯ ಪಡುತ್ತಿದ್ದ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂದಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ: ಮೂವರು ಆರೋಪಿಗಳ ಬಂಧನ
ಅಲ್ಲಿನ ಸಿಬ್ಬಂದಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಕರ್ನಾಟಕಕ್ಕೆ ಒಂದು ತಿಂಗಳಿನಿಂದ ಬಸ್ ಓಡಿಸುವುದನ್ನು ನಿಲ್ಲಿಸಿದೆ.