Karnataka news paper

ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ಪುನರ್ ಸ್ಥಾಪನೆ, ಕರವೇ ಕಾರ್ಯಕರ್ತರಿಂದ ಪ್ರತಿಭಟನೆ, ಪೊಲೀಸರ ಲಾಠಿಚಾರ್ಜ್


Online Desk

ಬೆಳಗಾವಿ/ಬೆಂಗಳೂರು: ಬೆಳಗಾವಿಯಲ್ಲಿ ಪರಿಸ್ಥಿತಿ ಕ್ಷಣದಿಂದ ಕ್ಷಣಕ್ಕೆ ಉದ್ವಿಗ್ನವಾಗುತ್ತಿದೆ. ಪುಂಡರು ನಿನ್ನೆ ನಸುಕಿನ ಜಾವ ಧ್ವಂಸಗೊಳಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸರಿಪಡಿಸಿ ಸ್ಥಳೀಯರು ಇಂದು ಭಾನುವಾರ ಪುನರ್ ಪ್ರತಿಷ್ಠಾಪಿಸಿದ್ದಾರೆ.

ನಂತರ ಪುತ್ಥಳಿಗೆ ಹಾಲಿನ ಅಭಿಷೇಕ ಮಾಡಿ ಸ್ಥಳೀಯ ಮತ್ತು ಕನ್ನಡಪರ ಮುಖಂಡರು ಪೂಜೆ ಸಲ್ಲಿಸಲಿದ್ದಾರೆ. ಜೈ ಜೈ ರಾಯಣ್ಣ, ಜೈ ಜೈ ಚೆನ್ನಮ್ಮ ಎಂದು ಘೋಷಣೆ ಕೂಗಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.

ಬೆಳಗಾವಿಯಲ್ಲಿ ಪ್ರತಿಭಟನೆ ಕಿಚ್ಚು ಹೆಚ್ಚಾಗುತ್ತಿದೆಯ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿದ್ದಾರೆ. 

ಇನ್ನು ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಗದ್ದಲ ಮತ್ತು ಸಮಾಜದ ಶಾಂತಿಯನ್ನು ಕೆಡಿಸುವ ಕೆಲಸವನ್ನು ಖಂಡಿಸಿ ಕರವೇ ಕಾರ್ಯಕರ್ತರು ಜಿಲ್ಲೆಯಲ್ಲಿ ಮತ್ತು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಿರನವಾಡಿಯಲ್ಲಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪೊಲೀಸರ ಬಂದೋಬಸ್ತ್ ಮಾಡಲಾಗಿದೆ. ಅನಗೋಳದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸಿದನ್ನು ಖಂಡಿಸಿ ಕರವೇ ಕಾರ್ಯಕರ್ತರು ಮೆರವಣಿಗೆ ಹೊರಟಿದ್ದರು. ಈ ವೇಳೆ ಪ್ರತಿಭಟನಾಕಾರನ್ನು ಪೊಲೀಸರು ಪಡೆದರು. ವಶಕ್ಕೆ ಪಡೆಯುವುದನ್ನು ವಿರೋಧಿಸಿದ ಹೋರಾಟಗಾರರು, ಪೊಲೀಸರ ಜತೆ ವಾಗ್ವಾದ ನಡೆಸಿದ್ದಾರೆ. ಲಾಠಿ ಹಿಡಿದು ಪೊಲೀಸರು ಧರಣಿ ನಿರತರನ್ನು ಚದುರಿಸಿದ್ದಾರೆ.

ಇದನ್ನೂ ಓದಿ: ಶಿವಾಜಿ ಪ್ರತಿಮೆ ವಿರೂಪ: ಕನ್ನಡಿಗರದ್ದು ವಿಕೃತ ಮನಸ್ಥಿತಿ, ಪ್ರಧಾನಿ ಮಧ್ಯ ಪ್ರವೇಶಕ್ಕೆ ಉದ್ಧವ್ ಠಾಕ್ರೆ ಒತ್ತಾಯ

ಮಹಾರಾಷ್ಟ್ರ ಸಿಎಂ ವಿರುದ್ಧ ಆಕ್ರೋಶ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರತಿಕೃತಿ ದಹಿಸಿ ರಸ್ತೆ ತಡೆದು ಪ್ರತಿಭಟನೆ ಮಾಡುತ್ತಿದ್ದರು. ಕರವೇ ಶಿವರಾಮೇಗೌಡ ಬಣ ಜಿಲ್ಲಾಧ್ಯಕ್ಷ ವಾಜೀದ್ ಸೇರಿ 20ಕ್ಕೂ ಅಧಿಕ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆಪಡೆದಿದ್ದಾರೆ. ಧರಣಿ ನಿರತರನ್ನು 2 ಸರ್ಕಾರಿ ಬಸ್​ಗಳಲ್ಲಿ ತುಂಬಿಸಿ ಪೊಲೀಸರು ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ಪುಂಡಾಟಿಕೆ: ಬೆಳಗಾವಿಯಲ್ಲಿ ಪರಿಸ್ಥಿತಿ ಉದ್ವಿಗ್ನ, ನಾಳೆ ಬೆಳಿಗ್ಗೆಯವರೆಗೆ ನಿಷೇಧಾಜ್ಞೆ ಮುಂದುವರಿಕೆ

ಬೆಳಗಾವಿ ಚಲೋಗೆ ಚಾಲನೆ: ಬೆಳಗಾವಿಯಲ್ಲಿನ ಎಂಇಎಸ್ ಕಾರ್ಯಕರ್ತರ ಕುಕೃತ್ಯ ಖಂಡಿಸಿ ಕರವೇ ಕಾರ್ಯಕರ್ತರು ಬೆಂಗಳೂರಿನಿಂದ ಬೆಳಗಾವಿ ಚಲೋ ಹಮ್ಮಿಕೊಂಡಿದ್ದಾರೆ. ತುಮಕೂರು, ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿಗೆ ಸಾಗಿ ನಾಳೆ ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.



Read more