Karun Nair And KL Rahul – ಜೂನ್ 20ರಿಂದ ಪ್ರಾರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಗೆ ಪೂರ್ವಭಾವಿಯಾಗಿ ಇಂಗ್ಲೆಂಡ್ ನ ಮಾಜಿ ಸ್ಟಾರ್ ಬ್ಯಾಟರ್ ಕೆವಿನ್ ಪೀಟರ್ಸನ್ ಅವರು ಕರುಣ್ ನಾಯರ್ ಮತ್ತು ಕೆ.ಎಲ್. ರಾಹುಲ್ ಅವರನ್ನು ಹೊಗಳಿದ್ದಾರೆ. ದೇಶೀಯ ಕ್ರಿಕೆಟ್ ನಲ್ಲಿ ಅದ್ಭುತ ಪ್ರದರ್ಶನ ತೋರಿ ಭಾರತ ತಂಡಕ್ಕೆ ಆಯ್ಕೆಯಾಗಿರುವ ಕರುಣ್ ನಾಯರ್ ಇದೀಗ ಭಾರತ ಎ ತಂಡದ ಪರ ಇಂಗ್ಲೆಂಡ್ ಲಯನ್ಸ್ ವಿರುದ್ಧ ದ್ವಿಶತಕ ಹೊಡೆದು ಮಿಂಚಿದ್ದಾರೆ.
ಹೈಲೈಟ್ಸ್:
ಕರುಣ್ ನಾಯರ್ ಮತ್ತು ಕೆ.ಎಲ್. ರಾಹುಲ್ ಅವರನ್ನು ‘ಎರಡು ರತ್ನಗಳು’ ಎಂದ ಇಂಗ್ಲೆಂಡ್ ನ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್
ದೇಶೀಯ ಕ್ರಿಕೆಟ್ ನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದ ಕರುಣ್ ನಾಯರ್ 8 ವರ್ಷಗಳ ನಂತರ ಭಾರತ ತಂಡಕ್ಕೆ ವಾಪಸ್
ಭಾರತ ಎ ತಂಡದ ಪರವಾಗಿ ಇಂಗ್ಲೆಂಡ್ ಲಯನ್ಸ್ ವಿರುದ್ಧ ಅಮೋಘ ದ್ವಿಶತಕ ಬಾರಿಸಿದ ಕರುಣ್ ಬಗ್ಗೆ ಕೆವಿನ್ ಪೀಟರ್ಸನ್ ಪ್ರಶಂಸೆ