ಹೊಸ ವರ್ಷಾಚರಣೆ!
ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ ಅಥವಾ ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ಯಾವುದೇ ವಿಶೇಷ ಕಾರ್ಯಕ್ರಮ ನಡೆಸಲು ಅವಕಾಶವಿರುವುದಿಲ್ಲ. ಇಲ್ಲಿಯ ಸಿಬ್ಬಂದಿ ಆರ್‌ಟಿ-ಪಿಸಿಆರ್ ನೆಗೆಟಿವ್, 2 ಡೋಸ್ ಕೋವಿಡ್ ಲಸಿಕೆ ಕಡ್ಡಾಯವಾಗಿ ಪಡೆಯುವ ಮೂಲಕ ಕಾರ್ಯನಿರ್ವಹಿಸಬಹುದು. ಹೊಸ ವರ್ಷ ಆಚರಿಸಲು ಸಾರ್ವಜನಿಕ ಸ್ಥಳ ಸೇರಿದಂತೆ ರಸ್ತೆ, ಉದ್ಯಾನವನಗಳು, ಆಟದ ಮೈದಾನ ಇತ್ಯಾದಿಗಳನ್ನು ಬಳಸಬಾರದು.
ಓಮಿಕ್ರಾನ್ ಹಾವಳಿ ನಿಯಂತ್ರಣಕ್ಕೆ ಕೇಂದ್ರ ಸರಕಾರದಿಂದ ತ್ವರಿತ ಕ್ರಮ!
ಅಪಾರ್ಟ್‌ಮೆಂಟ್‌ಗೆ ಸೂಚನೆ!
ಅಪಾರ್ಟ್‌ಮೆಂಟ್ ಅಸೋಸಿಯೇಶನ್‌ಗೆ ಸಂಬಂಧಿಸಿದಂತೆ ಸಾಮಾಜಿಕ ಅಂತರ ಹಾಗೂ ಕೋವಿಡ್ ಸಮುಚಿತ ವರ್ತನೆಯೊಂದಿಗೆ ತಮ್ಮ ಆವರಣದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿಸಲಾಗಿದೆ. ಆದರೆ, ಗುಂಪು ನೃತ್ಯಕ್ಕಾಗಿ ಡಿಜೆ/ ಡ್ಯಾನ್ಸ್ ಪ್ಲೋರ್‌ನಂತಹ ಯಾವುದೇ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ಹೇಳಿದ್ದಾರೆ.