ನಾಯಕ ಶ್ರೇಯಸ್ ಅಯ್ಯರ್ ಅವರ ಸಮಯೋಚಿತ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿ ಐಪಿಎಲ್ 2025 ಫೈನಲ್ ಪ್ರವೇಶಿಸಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ 204 ರನ್‌ಗಳ ಗುರಿಯನ್ನು ಬೆನ್ನಟ್ಟಿ ಪಂಜಾಬ್ ಕಿಂಗ್ಸ್ ಗೆಲುವು ಸಾಧಿಸಿತು. ಜೂನ್ 3 ಮಂಗಳವಾರದಂದು ನಡೆಯುವ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪಂಜಾಬ್ ಕಿಂಗ್ಸ್ ಎದುರಿಸಲಿದೆ.
ಹೈಲೈಟ್ಸ್:
ನಾಯಕ ಶ್ರೇಯಸ್ ಅಯ್ಯರ್ ಅವರ 87 ರನ್ ಗಳ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಜಯ
ಮುಂಬೈ ಇಂಡಿಯನ್ಸ್ ತಂಡವನ್ನು 5 ವಿಕೆಟ್ ಗಳಿಂದ ಸೋಲಿಸಿದ ಸೋ ಐಪಿಎಲ್ 2025 ಫೈನಲ್ ಪ್ರವೇಶಿಸಿದೆ
2014ರ ಬಳಿಕ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದು, ಫೈನಲ್ ನಲ್ಲಿ RCB ತಂಡವನ್ನು ಎದುರಿಸಲಿದೆ