ಮೈಸೂರು ಜಿಲ್ಲೆಯಲ್ಲಿ ಹೆಚ್ಚುವರಿ ವಿದ್ಯುತ್ ಬೇಡಿಕೆಗಾಗಿ 44 ಉಪ ವಿದ್ಯುತ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ರಾಜ್ಯದಲ್ಲಿನ ಎಲ್ಲಾ ಅಕ್ರಮ ಕೃಷಿ ಪಂಪ್‌ಸೆಟ್‌ಗಳನ್ನು ಮೂರು ತಿಂಗಳಲ್ಲಿ ಸಕ್ರಮಗೊಳಿಸಲಾಗುವುದು. ಕುಸುಮ್ ಸಿ ಯೋಜನೆಯಡಿ ಸೌರಶಕ್ತಿಯಿಂದ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
ಹೈಲೈಟ್ಸ್:
- ಜಿಲ್ಲೆಯಲ್ಲಿ ಹೆಚ್ಚುವರಿ 44 ಉಪ ವಿದ್ಯುತ್ ಕೇಂದ್ರ.
- ಹೆಚ್ಚುವರಿ ವಿದ್ಯುತ್ ಬೇಡಿಕೆ ಹಿನ್ನೆಲೆ.
- ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿಕೆ.