England Test Team – ಐಪಿಎಲ್ ಮುಗಿದೊಡನೆ ಇದೀಗ ಕ್ರಿಕೆಟ್ ಪ್ರಿಯರ ಚಿತ್ತ ಇಂಗ್ಲೆಂಡ್ ನತ್ತ ಹೊರಳಿದೆ. ಕಾರಣ ಶುಭ್ಮನ್ ಗಿಲ್ ನೇತೃತ್ವದ ಭಾರತ ತಂಡ ಅಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಹೆಡಿಂಗ್ಲಿಯಲ್ಲಿ ಜೂನ್ 20ರಿಂದ ಪ್ರಾರಂಭ ಆಗಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಇದೀಗ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ(ECB)ಯು 14 ಮಂದಿಯ ತಂಡವನ್ನು ಪ್ರಕಟಿಸಿದೆ. ಅನುಭವಿ ಬೆನ್ ಸ್ಟೋಕ್ಸ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ.