Karnataka news paper

ಭಾರತದಲ್ಲಿ ಟೆಕ್ನೋ ಕ್ಯಾಮನ್ 18 ಸ್ಮಾರ್ಟ್‌ಫೋನ್‌ ಲಾಂಚ್!..ಸೆಲ್ಫಿ ಕ್ಯಾಮೆರಾ ಎಷ್ಟಿದೆ?


ಕ್ಯಾಮನ್

ಹೌದು, ಟೆಕ್ನೋ ಕಂಪೆನಿ ಹೊಸ ಟೆಕ್ನೋ ಕ್ಯಾಮನ್ 18 ಸ್ಮಾರ್ಟ್‌ಫೋನ್‌ ದೇಶಿಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಮೀಡಿಯಾ ಟೆಕ್ ಹಿಲಿಯೋ G85 ಪ್ರೊಸೆಸರ್‌ ಪವರ್ ಪಡೆದಿದ್ದು, 5,000WAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಟೆಕ್ನೋ ಕ್ಯಾಮನ್ 18 ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದಿದೆ ಹಾಗೂ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸ

ಟೆಕ್ನೋ ಕ್ಯಾಮನ್ 18 ಸ್ಮಾರ್ಟ್‌ಫೋನ್‌ 1,080 x 2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8 ಇಂಚಿನ ಫುಲ್‌ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 396 ppi ಆಗಿದೆ. ಸ್ಯಾಂಪ್ಲಿಂಗ್ ರೇಟ್‌ ಮತ್ತು 20.5:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಪ್ರೊಸೆಸರ್‌ ಪವರ್ ಯಾವುದು

ಪ್ರೊಸೆಸರ್‌ ಪವರ್ ಯಾವುದು

ಟೆಕ್ನೋ ಕ್ಯಾಮನ್ 18 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಹಿಯೋಸ್ ವಿ 7.6 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ತ್ರಿವಳಿ ಕ್ಯಾಮೆರಾ ರಚನೆ

ತ್ರಿವಳಿ ಕ್ಯಾಮೆರಾ ರಚನೆ

ಟೆಕ್ನೋ ಕ್ಯಾಮನ್ 18 ಸ್ಮಾರ್ಟ್‌ಫೋನ್‌ ತ್ರಿವಳಿ ಕ್ಯಾಮೆರಾ ರಚನೆಯನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ ಬೇಸಿಕ್ ಮೆಗಾ ಪಿಕ್ಸೆಲ್ ಸೆನ್ಸಾರ್‌ ಒಳಗೊಂಡಿದೆ. ಇದಲ್ಲದೆ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದರೊಂದಿಗೆ ಫೋಟೊ ಎಡಿಟಿಂಗ್ ಆಯ್ಕೆಗಳು ಇವೆ. ಹಾಗೆಯೇ TAIVOS ತಂತ್ರಜ್ಞಾನದೊಂದಿಗೆ ಕಡಿಮೆ ಬೆಳಕಿನ ಛಾಯಾಗ್ರಹಣ ಮೋಡ್ ಜೊತೆಗೆ 2K ವೀಡಿಯೊ ರೆಕಾರ್ಡಿಂಗ್ ಅನ್ನು ಸ್ಮಾರ್ಟ್‌ಫೋನ್ ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಟೆಕ್ನೋ ಕ್ಯಾಮನ್ 18 ಸ್ಮಾರ್ಟ್‌ಫೋನ್‌ 5,000 wAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ ಎಲ್ ಟಿಇ, ವೈ-ಫೈ, ಬ್ಲೂಟೂತ್ ವಿ 5, ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಕ್ಯಾಮನ್ 18 ಸ್ಮಾರ್ಟ್‌ಫೋನ್‌ 4GB RAM ಮತ್ತು 128GB ಸ್ಟೋರೇಜ್ ವೇರಿಯಂಟ್ ಮಾದರಿಗೆ 14,999 ರೂ.ಬೆಲೆ ಹೊಂದಿದೆ. ಈ ಫೋನ್ ಮಸ್ಕ್ ಗ್ರೇ ಹಾಗೂ ಐರಿಶ್ ಪರ್ಪಲ್ ಬಣ್ಣಗಳ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಇದೇ ಡಿಸೆಂಬರ್ 27 ರಂದು ಆನ್‌ಲೈನ್ ಹಾಗೂ ಆಫ್‌ಲೈನ್‌ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ.



Read more…