ಮೈಸೂರು ರೈಲ್ವೆ ನಿಲ್ದಾಣದಲ್ಲಿ 439 ಕೋಟಿ ರೂ. ವೆಚ್ಚದಲ್ಲಿ ಐದು ಹೆಚ್ಚುವರಿ ಪ್ಲಾಟ್‌ಫಾರಂ ನಿರ್ಮಾಣವಾಗಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ರೈಲ್ವೆ ಇಲಾಖೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ, ಅಧಿಕಾರಿಗಳು ಕನ್ನಡ ಕಲಿಯದಿದ್ದರೆ ಹುಬ್ಬಳ್ಳಿಗೆ ವರ್ಗಾವಣೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಹೈಲೈಟ್ಸ್:
ಮೈಸೂರು ರೈಲ್ವೆ ನಿಲ್ದಾಣದಲ್ಲಿ 439 ಕೋಟಿ ರೂ. ವೆಚ್ಚದಲ್ಲಿ 5 ಹೆಚ್ಚುವರಿ ಪ್ಲಾಟ್‌ಫಾರಂಗಳನ್ನು ನಿರ್ಮಾಣ ಮಾಡಲಾಗುತ್ತಿದೆ.
ರೈಲ್ವೆ ಸಿಬ್ಬಂದಿಯ ಅನುಕೂಲಕ್ಕಾಗಿ ವಸತಿ ಗೃಹವನ್ನು ನಿರ್ಮಾಣ ಮಾಡಲಾಗುತ್ತಿದೆ ಮತ್ತು ಇತರ ಸೌಲಭ್ಯಗಳಾದ ಸಬ್‌ವೇ, ಸ್ಕೈವಾಕ್‌ಗಳನ್ನು ಒದಗಿಸಲಾಗುತ್ತಿದೆ.
ಕೇಂದ್ರ ಸಚಿವ ವಿ. ಸೋಮಣ್ಣ ಅವರು ಕನ್ನಡ ಕಲಿಯದ ಅಧಿಕಾರಿಗಳಿಗೆ ಕನ್ನಡ ಕಲಿಯಲು ಆದೇಶ ನೀಡಿದರು.