ಕನಸಿನ ತಂಡಗಳನ್ನು ಯಾರು ಬೇಕಾದರೂ ಮಾಡಬಹುದು. ಇದೀಗ ನವಜೋತ್ ಸಿಂಗ್ ಸಿಧು ಅವರು ತಮ್ಮ ಐಪಿಎಲ್ 2025 ಎಂಬ ತಂಡ ರಚಿಸಿದ್ದಾರೆ. ಆದರೆ ಅದಕ್ಕೆ ರೋಹಿತ್ ಶರ್ಮಾ ಅವರನ್ನು ನಾಯಕರನ್ನಾಗಿ ಮಾಡಿರುವುದು ಟ್ರೋಲಿಗರಿಗೆ ಆಹಾರವಾಗಿಬಿಟ್ಟಿದೆ. ಕಳೆದ ವರ್ಷವೇ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕಪಟ್ಟದಿಂದ ಕೆಳಗಿಳಿಸಿ ಹಾರ್ದಿಕ್ ಪಾಂಡ್ಯ ಅವರಿಗೆ ಜವಾಬ್ದಾರಿ ಒಪ್ಪಿಸಲಾಗಿದೆ. ಹೀಗಿರುವಾಗ ಯಾವ ಲೆಕ್ಕಾಚಾರದಲ್ಲಿ ಅವರನ್ನು ಐಪಿಎಲ್ ತಂಡದ ನಾಯಕರನ್ನಾಗಿ ಮಾಡಿದಿರಿ ಎಂದು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಚಟಾಕಿ ಹಾರಿಸಿದ್ದಾರೆ.
ಹೈಲೈಟ್ಸ್:
ಭಾರತ ತಂಡದ ಮಾಜಿ ಆರಂಭಿಕ ಬ್ಯಾಟರ್ ನವಜೋತ್ ಸಿಂಗ್ ಸಿಧು ಅವರಿಂದ ಐಪಿಎಲ್ 2025 ರ ಕಾಲ್ಪನಿಕ ತಂಡ ರಚನೆ
ಅದಕ್ಕೆ ರೋಹಿತ್ ಶರ್ಮಾ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿರುವುದಕ್ಕೆ ಸಾಮಜಿಕ ಜಾಲತಾಣದಲ್ಲಿ ತೀವ್ರ ಟೀಕೆ
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್ ನಲ್ಲಿ ಕಾಣಿಸಿಕೊಳ್ಳದ ರೋಹಿತ್ ಶರ್ಮಾ ಅವರನ್ನು ನಾಯಕನನ್ನಾಗಿ ಮಾಡಿದ್ದು ಹೇಗೆ ಎಂಬ ಪ್ರಶ್ನೆ