Karnataka news paper

ನನಗೀಗ 89 ವರ್ಷ, ಹೋರಾಟದ ಶಕ್ತಿ ಕುಂದಿಲ್ಲ; ತುಮಕೂರಿನಿಂದಲೇ ಮತ್ತೆ ಲೋಕಸಭೆಗೆ ಸ್ಪರ್ಧೆ: ಎಚ್.ಡಿ ದೇವೇಗೌಡ


Source : Online Desk

ತುಮಕೂರು : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೆ ತುಮಕೂರಿನಿಂದಲೇ ಸ್ಪರ್ಧಿಸುವುದಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮಂಗಳವಾರ ಘೋಷಿಸಿದ್ದಾರೆ.

ಪಟ್ಟಣದಲ್ಲಿ ಮಂಗಳವಾರ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಪಕ್ಷ ಎಂದರೆ ಕೇವಲ ದೇವೇಗೌಡ, ಎಚ್‌.ಡಿ.ಕುಮಾರಸ್ವಾಮಿ ಅಲ್ಲ. ನಾನು, ನನ್ನ ಮಗ ಮಾತ್ರ ಪಕ್ಷವನ್ನು ಉಳಿಸಲು ಸಾಧ್ಯವಿಲ್ಲ’ ಎಂದರು.

ಇದನ್ನೂ ಓದಿ: ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆಯಿಲ್ಲ; 2023ರ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆ: ಎಚ್.ಡಿ ಕೆ

‘ನನಗೀಗ 89 ವರ್ಷ. ಹೋರಾಟದ ಶಕ್ತಿ ಕುಂದಿಲ್ಲ ಇನ್ನೂ ಚೈತನ್ಯವಿದೆ. ಪಕ್ಷ ಉಳಿಸುವ ಛಲದಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸ ಮಾಡ್ತೇನೆ. 2023ರ ಚುನಾವಣೆ ನಂತರ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೋ, ಇಲ್ಲವೋ ಗೊತ್ತಿಲ್ಲ. ಅದು ಅವರ ಹಣೆ ಬರಹ. ನಾನು ಮಾತ್ರ 2024ರಲ್ಲಿ ಮತ್ತೆ ತುಮಕೂರು ಲೋಕಸಭಾ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ’ ಎಂದರು. ಇನ್ನೂ ತುರುವೆಕೆರೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.



Read more