Karnataka news paper

ಯಾವುದೇ ಗೊಂದಲ ಇಲ್ಲ, ನಿಗದಿಯಂತೆ ಬೆಳಗಾವಿಯಲ್ಲಿ ವಿಧಾನ ಮಂಡಲ ಚಳಿಗಾಲ ಅಧಿವೇಶನ: ಸಿಎಂ ಬೊಮ್ಮಾಯಿ


Source : The New Indian Express

ಬೆಳಗಾವಿ: ಓಮಿಕ್ರಾನ್ ಸೋಂಕಿನ ಆತಂಕ ನಡುವೆ ವಿಧಾನ ಮಂಡಲದ ಚಳಿಗಾಲ ಅಧಿವೇಶನ ನಡೆಸುವ ಬಗ್ಗೆ ಇದ್ದ ಗೊಂದಲಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರೆ ಎಳೆದಿದ್ದಾರೆ. 

10 ದಿನಗಳ ವಿಧಾನ ಮಂಡಲ ಚಳಿಗಾಲ ಅಧಿವೇಶನ ಬೆಳಗಾವಿಯಲ್ಲಿ ಪೂರ್ವ ನಿಗದಿಯಂತೆ ನಡೆಯಲಿದ್ದು ಡಿಸೆಂಬರ್ 13ರಂದು ಆರಂಭವಾಗಲಿದೆ. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಬೆಳಗಾವಿಯ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸಲಾಗುವುದು. ವಿಧಾನಸಭಾಧ್ಯಕ್ಷರು ಮತ್ತು ವಿಧಾನ ಪರಿಷತ್ ಸಭಾಪತಿಗಳು ಇತ್ತೀಚೆಗೆ ಬೆಳಗಾವಿಗೆ ಹೋಗಿ ಅಧಿವೇಶನ ಸಿದ್ದತೆಯನ್ನು ಪರಿಶೀಲಿಸಿ ಬಂದಿದ್ದಾರೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಅಧಿವೇಶನ ನಡೆಸಲಾಗುವುದು ಎಂದು ಸರ್ಕಾರ ಹೇಳಿದ್ದರೂ ಕೂಡ ಕೆಲವು ಜನಪ್ರತಿನಿಧಿಗಳು ಮತ್ತು ಸಚಿವಾಲಯ ಸಿಬ್ಬಂದಿ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಮಧ್ಯೆ ಅಧಿವೇಶನ ನಡೆಸುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಅಲ್ಲದೆ ದೇಶದಲ್ಲಿಯೇ ಮೊದಲ ಎರಡು ಓಮಿಕ್ರಾನ್ ಪ್ರಕರಣಗಳು ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪತ್ತೆಯಾಗಿವೆ. ಆದರೆ ಅಧಿವೇಶನ ನಡೆಸುವ ಬಗ್ಗೆ ಜನಪ್ರತಿನಿಧಿಗಳಿಗೆ ಮತ್ತು ಸಿಬ್ಬಂದಿಗೆ ಯಾವುದೇ ಆತಂಕ ಬೇಡ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ನಿನ್ನೆ ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ಕೋವಿಡ್ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಕಲಾಪ ನಡೆಸಲು ಸಾಧ್ಯವಾಗಿರಲಿಲ್ಲ. ಆದರೆ ಈ ವರ್ಷ ಕಡ್ಡಾಯವಾಗಿ ಕೋವಿಡ್ ನಿಯಮ ಪಾಲಿಸಿಕೊಂಡು ಅಧಿವೇಶನ ನಡೆಸಲಾಗುವುದು ಎಂದು ಹೇಳಿದ್ದಾರೆ.



Read more