Karnataka news paper

ಕೋವಿಡ್-19: ರಾಜ್ಯದಲ್ಲಿ ಇಂದು 321 ಹೊಸ ಸೋಂಕು ಪ್ರಕರಣ, 4 ಸಾವು ವರದಿ


Online Desk

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 321 ಹೊಸ ಸೋಂಕು ಪ್ರಕರಣಗಳು ಮತ್ತು 4 ಸಾವು ವರದಿಯಾಗಿದೆ.

ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಅವರು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಇಂದು ಒಟ್ಟು 321 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು,  4 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 38299ಕ್ಕೆ ಏರಿಕೆಯಾಗಿದೆ. 

ರಾಜಧಾನಿ ಬೆಂಗಳೂರು ನಗರವೊಂದರಲ್ಲಿಯೇ 211 ಮಂದಿ ಸೋಂಕಿತರು ಪತ್ತೆಯಾಗಿದ್ದು, ಸೋಂಕಿನಿಂದ ನಗರದಲ್ಲಿ ಯಾವುದೇ ರೋಗಿಗಳು ಸಾವನ್ನಪ್ಪಿಲ್ಲ.  ಇನ್ನು ರಾಜ್ಯಾದ್ಯಂತ ಇಂದು 253 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಗುಣಮುಖರ ಸಂಖ್ಯೆ 2957799ಕ್ಕೇರಿದೆ. ಪ್ರಸ್ತುತ ರಾಜ್ಯದಲ್ಲಿ 7138 ಸಕ್ರಿಯ ಪ್ರಕರಣಗಳಿವೆ.

ಅಂತೆಯೇ ಇಂದು ರಾಜ್ಯದಲ್ಲಿ ಯಾವುದೇ ಹೊಸ ಓಮಿಕ್ರಾನ್ ಸೋಂಕಿತರು ಪತ್ತೆಯಾಗಿಲ್ಲ. ಪ್ರಸ್ತುತ ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 19ರಲ್ಲಿಯೇ ಇದೆ. ರಾಜ್ಯದಲ್ಲಿ ಪ್ರಸ್ತುತ ಪಾಸಿಟಿವಿಟಿ ದರ ಶೇ.0.32ರಷ್ಟಿದ್ದು, ಮರಣ ಪ್ರಮಾಣ ಶೇ.1.24ರಷ್ಟಿದೆ.





Read more