Karnataka news paper

40,000ರೂ. ಒಳಗೆ ಲಭ್ಯವಿರುವ ಟಾಪ್‌ 5 ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳು!


ಮುಂದಾಗುತ್ತಾರೆ

ಹೌದು, ಗ್ರಾಹಕರ ಅಭಿರುಚಿಯು ಭಿನ್ನವಾಗಿದೆ. ಕೆಲವರು ಬಜೆಟ್ ದರದ ಫೋನ್‌ಗಳನ್ನು ಖರೀದಿಸುತ್ತಾರೆ. ಮತ್ತೆ ಕೆಲವರು ದುಬಾರಿ ಬೆಲೆಯ ಪ್ರೀಮಿಯಂ ಫೋನ್‌ಗಳನ್ನು ಖರೀದಿ ಮಾಡಲು ಮುಂದಾಗುತ್ತಾರೆ. ಸದ್ಯ ಈ ತಿಂಗಳಿನಲ್ಲಿ (ಡಿಸೆಂಬರ್ 2021) ನೀವೇನಾದರೂ 40,000 ರೂ. ಒಳಗಿನ ಬೆಲೆಯಲ್ಲಿ ಅತ್ಯುತ್ತಮ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಖರೀದಿಸಲು ಯೋಚನೆ ಮಾಡಿದ್ದರೇ, ಒನ್‌ಪ್ಲಸ್‌, ಶಿಯೋಮಿ, ಒಪ್ಪೋ, ವಿವೋ ಕಂಪನಿಗಳ ಕೆಲವು ಫೋನ್‌ಗಳು ಆಕರ್ಷಕ ಎನಿಸುತ್ತವೆ. ಹಾಗಾದರೇ 40,000 ರೂ. ಒಳಗೆ ಲಭ್ಯ ಇರುವ ಪ್ರಮುಖ 5 ಫೋನ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌

iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌

iQoo 7 ಲೆಜೆಂಡ್ ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.62 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 128GB ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಹಾಗೆಯೇ 4,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫ್ಲ್ಯಾಶ್‌ಚಾರ್ಜ್ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಒನ್‌ಪ್ಲಸ್‌ 9R ಫೋನ್

ಒನ್‌ಪ್ಲಸ್‌ 9R ಫೋನ್

ಒನ್‌ಪ್ಲಸ್ 9 R ಸ್ಮಾರ್ಟ್‌ಫೋನ್‌ 2400 × 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಪ್ಲಾಟ್‌ ಪ್ಲೂಯಿಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಆಪರೇಟಿಂಗ್‌ ಸಿಸ್ಟಮ್‌ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM+128GB, 12GB RAM+256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಹಾಗೆಯೇ ಈ ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 65W ವಾರ್ಪ್ ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

ಒಪ್ಪೋ ರೆನೋ 6 ಪ್ರೊ ಸ್ಮಾರ್ಟ್‌ಫೋನ್‌

ಒಪ್ಪೋ ರೆನೋ 6 ಪ್ರೊ ಸ್ಮಾರ್ಟ್‌ಫೋನ್‌

ಒಪ್ಪೋ ರೆನೋ 6 ಪ್ರೊ 5G ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 1200 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಕಲರ್ಓಎಸ್ 11.3 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಸಂಗ್ರಹ ದೊಂದಿಗೆ ಜೋಡಿಸಲ್ಪಟ್ಟಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮೊನೊ ಕ್ಯಾಮೆರಾವನ್ನು ಒಳಗೊಂಡಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.

ಶಿಯೋಮಿ ಮಿ 11X ಪ್ರೊ ಸ್ಮಾರ್ಟ್‌ಫೋನ್‌

ಶಿಯೋಮಿ ಮಿ 11X ಪ್ರೊ ಸ್ಮಾರ್ಟ್‌ಫೋನ್‌

ಮಿ 11X ಪ್ರೊ ಸ್ಮಾರ್ಟ್‌ಫೋನ್‌ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ AMOLED 120Hz ರಿಫ್ರೆಶ್ ರೇಟ್‌, 360Hz ಟಚ್ ಸ್ಯಾಂಪ್ಲಿಂಗ್ ರೇಟ್‌, 1,300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ ಹೆಚ್‌ಡಿಆರ್ 10 + ಬೆಂಬಲ, 100% ಡಿಸಿಐ ಪಿ3 ಯನ್ನು ಹೊಂದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ವಿವೋ X60 ಸ್ಮಾರ್ಟ್‌ಫೋನ್‌

ವಿವೋ X60 ಸ್ಮಾರ್ಟ್‌ಫೋನ್‌

ವಿವೋ X60 ಫೋನ್ 1,080 x 2,376 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ದೊಂದಿಗೆ 6.56 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ AMOLED ಡಿಸ್‌ಪ್ಲೇ ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 19.8:9 ಆಗಿದ್ದು, 120Hz ರೀಫ್ರೇಶ್‌ ರೇಟ್‌ ಪಡೆದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಹೊಂದಿದ್ದು, 12GB RAM + 256GB ಆಯ್ಕೆಯನ್ನು ಒಳಗೊಂಡಿದೆ. ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 48ಎಂಪಿ ಸೆನ್ಸಾರ್‌ ನಲ್ಲಿದೆ. ಇನ್ನು ಸೆಲ್ಫಿ ಕ್ಯಾಮೆರಾವು 32 ಎಂಪಿ ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಹಾಗೆಯೇ 4,300mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ.



Read more…