ಮುಂಬೈ: ’83’ ಚಿತ್ರ ಬಿಡುಗಡೆಯಾವುದಕ್ಕೂ ಮುನ್ನ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆದಿದ್ದಾರೆ.
ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ದೀಪಿಕಾ ಅವರು ಭದ್ರತೆಯ ನಡುವೆ ದೇವಸ್ಥಾನಕ್ಕೆ ತೆರಳಿದ್ದಾರೆ.
’83’ ಚಿತ್ರವು ಇಂದು(ಶುಕ್ರವಾರ) ಬಿಡುಗಡೆಯಾಗಿದ್ದು, ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ.
ಕಪಿಲ್ ದೇವ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಗೆದ್ದ ರೋಚಕ ಕಥೆಯನ್ನು ‘83‘ ಹೊಂದಿದೆ. ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಈ ಚಿತ್ರವು ತೆರೆಕಂಡಿದೆ.
ಕಪಿಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ಹಾಗೂ ಕಪಿಲ್ ದೇವ್ ಅವರ ಪತ್ನಿ ರೋಮಿ ದೇವ್ ಪಾತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ದೀಪಿಕಾ ಅವರು ಈ ಚಿತ್ರದ ಸಹ ನಿರ್ಮಾಪಕಿಯೂ ಆಗಿದ್ದಾರೆ.