
ಕರಾಚಿ: ಬಲೂಚಿಸ್ತಾನ ಪ್ರಾಂತ್ಯದ ಚೆಕ್ ಪೋಸ್ಟ್ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಪಾಕಿಸ್ತಾನದ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.
ಬಲೂಚಿಸ್ತಾನ ಪ್ರಾಂತ್ಯದ ಕೆಚ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಭಯೋತ್ಪಾದಕರು ಚೆಕ್‌ಪೋಸ್ಟ್ ಮೇಲೆ ದಾಳಿ ನಡೆಸಿ ಇಬ್ಬರು ಸೈನಿಕರನ್ನು ಹತ್ಯೆ ಮಾಡಿದ್ದಾರೆ ಎಂದು ಮಿಲಿಟರಿಯ ಮಾಧ್ಯಮ ವಿಭಾಗ ತಿಳಿಸಿದೆ.
ಭಯೋತ್ಪಾದಕರ ಪತ್ತೆಗೆ ಘಟನೆ ನಡೆದ ಸ್ಥಳದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ತಿಳಿಸಲಾಗಿದೆ.