Online Desk
ಮೈಸೂರು: ಜಿಲ್ಲಾ ಜೆಡಿಎಸ್ ನಾಯಕ ಬೆಳವಾಡಿ ಶಿವಮೂರ್ತಿ ಅವರ ಪುತ್ರ ಪ್ರದೀಪ್ (32) ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪ್ರದೀಪ್ ತಂದೆ ಬೆಳವಾಡಿ ಶಿವಮೂರ್ತಿ ಜಿಲ್ಲಾ ಜೆಡಿಎಸ್ ಖಜಾಂಚಿ ಆಗಿದ್ದು, ತಾಯಿ ಭಾಗ್ಯ ಶಿವಮೂರ್ತಿ ಮೈಸೂರು ಜಿಪಂ ಮಾಜಿ ಅಧ್ಯಕ್ಷರಾಗಿದ್ದಾರೆ.
ಇದನ್ನೂ ಓದಿ: ಕೌಟುಂಬಿಕ ಕಲಹ: ರಾಮನಗರದಲ್ಲಿ ಕೆರೆಗೆ ಹಾರಿ ಮೂವರ ಆತ್ಮಹತ್ಯೆ, ಬದುಕುಳಿದ ಬಾಲಕಿ
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.