
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣವು ಆಪಲ್ ಐಫೋನ್ SE ಫೋನ್ ರಿಯಾಯಿತಿ ನೀಡಿದೆ. 64GB ಸ್ಟೋರೇಜ್ ವೇರಿಯಂಟ್ ಐಫೋನ್ XR ಫೋನ್ 30,599ರೂ. ಪ್ರೈಸ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ 15,490ರೂ.ಗಳ ವರೆಗೂ ಎಕ್ಸ್‌ಚೇಂಜ್ ಕೊಡುಗೆ ತಿಳಿಸಿದೆ. ಇದಲ್ಲದೇ ಕೆಲವು ಆಯ್ದ ಬ್ಯಾಂಕ್‌ಗಳ ಕಾರ್ಡ್ ಮೂಲಕ ಖರೀದಿಸಿದರೇ ಹೆಚ್ಚುವರಿ ಡಿಸ್ಕೌಂಟ್ ಸಹ ಲಭ್ಯ ಆಗಲಿದೆ. ಹಾಗೆಯೇ ಇಎಮ್‌ಐ ಆಯ್ಕೆ ಸಹ ಸಿಗಲಿದೆ. ಹಾಗಾದರೇ ಐಫೋನ್ SE ಫೀಚರ್ಸ್ ಬಗ್ಗೆ ಹಾಗೂ ನೂತನ ಐಫೋನ್ 13 ಸರಣಿಯ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ SE 4.7 ಇಂಚಿನ ರೆಟಿನಾ ಎಚ್‌ಡಿ ಮಾದರಿಯ ಐಪಿಎಸ್ ಎಲ್‌ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 750×1334 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ವೈಟ್ ಬ್ಯಾಲೆನ್ಸ್ ಹೊಂದಿಸಲು ಟ್ರೂ ಟೋನ್ ಟೆಕ್ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 625 ನಿಟ್‌ಗಳ ಗರಿಷ್ಠ ಬ್ರೈಟ್‌ನೆಶ್ ಅನ್ನು ನೀಡಲಿದೆ. ಅಲ್ಲದೆ ಡಾಲ್ಬಿ ವಿಷನ್ ಮತ್ತು ಎಚ್‌ಡಿಆರ್ 10 ಅನ್ನು ಬೆಂಬಲಿಸಲಿದೆ. ಇನ್ನು ಈ ಡಿಸ್‌ಪ್ಲೇ ಸ್ಕ್ರೀನ್ ಹೊಸ ಐಫೋನ್ ಮಾದರಿಗಳಲ್ಲಿ ಕಂಡುಬರುವ ಹ್ಯಾಪ್ಟಿಕ್ ಟಚ್ ಬೆಂಬಲವನ್ನು ಹೊಂದಿದೆ.

ಐಫೋನ್ SE ಪ್ರೊಸೆಸರ್
ಐಫೋನ್ SE ಆಪಲ್ ಕಂಪೆನಿ A 13 ಬಯೋನಿಕ್ SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿದೆ. ಪ್ರೊಸೆಸರ್‌ಗೆ ಪೂರಕವಾಗಿ ಐಒಎಸ್ 13 ಬೆಂಬಲ ನೀಡಲಿದೆ. ಹುಡ್ ಅಡಿಯಲ್ಲಿ, ಐಫೋನ್ 11, ಐಫೋನ್ 11 ಪ್ರೊ ಮತ್ತು ಐಫೋನ್ 11 ಪ್ರೊ ಮ್ಯಾಕ್ಸ್‌ನ ಮಾದರಿಯನ್ನೆ ಹೊಂದಿದೆ. ಇನ್ನು ಈ ಐಫೋನ್ RAM ಸಾಮರ್ಥ್ಯದ ಬಗ್ಗೆ ಯಾವುದೇ ಮಾಹಿತಿ ಲಬ್ಯವಿಲ್ಲ, ಆದರೆ ಈ ಐಫೋನ್ 64GB, 128GB, ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯ ವೇರಿಯೆಂಟ್ ಆಯ್ಕೆಯಲ್ಲಿ ಲಬ್ಯವಿದೆ.

ಐಫೋನ್ SE ಕ್ಯಾಮೆರಾ
ಐಫೋನ್ SE ರಿಯರ್ ಸೆಟ್‌ಅಪ್‌ನಲ್ಲಿ ಸಿಂಗಲ್ ಕ್ಯಾಮೆರಾ ಹೊಂದಿದೆ. ಇದು 2 ಮೆಗಾಪಿಕ್ಸೆಲ್ ಕ್ಯಾಮೆರಾ ಸೆನ್ಸಾರ್ f/ 1.8 ಲೆನ್ಸ್ + ಒಐಎಸ್ ಹೊಂದಿದೆ ಮತ್ತು ಸ್ಲೋ ಸಿಂಕ್ ಜೊತೆಗೆ ದಿಗೆ ಎಲ್ಇಡಿ ಟ್ರೂ ಟೋನ್ ಫ್ಲ್ಯಾಷ್ ಹೊಂದಿದೆ. ಇದು 60kps ವರೆಗೆ 4 ಕೆ ವಿಡಿಯೋ ರೆಕಾರ್ಡಿಂಗ್ ಮತ್ತು ಫೋಟೋಗಳಿಗಾಗಿ ಸ್ಮಾರ್ಟ್ HDR ಅನ್ನು ನೀಡುತ್ತದೆ. ಜೊತೆಗೆ ರಿಯರ್ ಕ್ಯಾಮೆರಾ ಪ್ರೊಟೆಕ್ಷನ್ ಗಾಗಿ ಶಾಂಪೈರ್ ಕ್ರಿಸ್ಟಲ್ ಲೆನ್ಸ್ ಕವರ್ ಅನ್ನು ನೀಡಲಾಗಿದೆ. ಇದಲ್ಲದೆ ಈ ಕ್ಯಾಮೆರಾ ಫೀಚರ್ಸ್‌ನಲ್ಲಿ ಪೋರ್ಟ್ರೇಟ್ ಮೋಡ್ ಅನ್ನು ನೀಡಲಾಗಿದೆ. ಜೊತೆಗೆ 7 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಐಫೋನ್ 13 ಫೋನ್ ಫೀಚರ್ಸ್
ಐಫೋನ್ 13 ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

ಐಫೋನ್ 13 ಮಿನಿ ಫೋನ್ ಫೀಚರ್ಸ್
ಐಫೋನ್ 13 ಮಿನಿ ಫೋನ್ 5.8 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. . 800nits ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. 5G ಸಪೋರ್ಟ್ ಪಡೆದಿದ್ದು, ಈ ಪ್ರೊಸೆಸರ್ 50% ವೇಗದ ಗ್ರಾಫಿಕ್ಸ್ ಸೌಲಭ್ಯ ಪಡೆದಿದೆ. ಐಫೋನ್ 13 ಮಿನಿ ಫೋನ್ ಸಹ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್ ಆಂಗಲ್ ಲೆನ್ಸ್ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

ಐಫೋನ್ 13 ಪ್ರೊ ಫೋನ್ ಫೀಚರ್ಸ್
ಐಫೋನ್ 13 ಪ್ರೊ ಫೋನ್ 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್ ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದ್ದು, ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

ಐಫೋನ್ 13 ಪ್ರೊ ಮ್ಯಾಕ್ಸ್ ಫೋನ್ ಫೀಚರ್ಸ್
ಐಫೋನ್ 13 ಪ್ರೊ ಮ್ಯಾಕ್ಸ್ ಫೋನ್ 6.7 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತಮ ರೆಸಲ್ಯೂಶನ್ ಪಡೆದಿದೆ. ಸೂಪರ್ ರೆಟೀನಾ XDR ಡಿಸ್‌ಪ್ಲೇ ಮಾದರಿಯಲ್ಲಿದೆ. ಹೈ ಎಂಡ್ ಬ್ರೈಟ್ನೆಸ್ ಹೊಂದಿದೆ. ಹಾಗೆಯೇ ಈ ಫೋನ್ ಸಹ A15 ಬಯೋನಿಕ್ ಪ್ರೊಸೆಸರ್ ಪಡೆದಿದೆ. ಇದರೊಂದಿಗೆ ಐಫೋನ್ 13 ಪ್ರೊ ಮ್ಯಾಕ್ಸ್ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಟೆಲಿಫೋಟೋ, ಅಲ್ಟ್ರಾ, ವೈಲ್ಡ್ ಲೆನ್ಸ್ ನಲ್ಲಿವೆ. ಕ್ಯಾಮೆರಾಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ನೈಟ್ ಮೋಡ್ ಆಯ್ಕೆ ಇದ್ದು, ಮಂದ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಬಹುದಾಗಿದೆ.