Karnataka news paper

ರಾಜಸ್ಥಾನ: ಕೋಟಾ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ


PTI

ಕೋಟಾ: ರಾಜಸ್ಥಾನದ ಕೋಟಾ ನಗರದ ಇಂದ್ರಪ್ರಸ್ಥ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ  ಶುಕ್ರವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಗ್ನಿ ಅವಘಡದ ವೇಳೆ ಫ್ಯಾಕ್ಟರಿಯ ಆವರಣದಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣ ಹಾನಿ ಅಥವಾ ಗಾಯಗೊಂಡ ಬಗ್ಗೆ ವರದಿಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ಕೇರಳದ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ​

ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿವೆ ಎಂದು ವಿಜ್ಞಾನ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಬ್ದುಲ್ ರಶೀದ್ ಅವರು ತಿಳಿಸಿದ್ದಾರೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಅವರು ಹೇಳಿದ್ದಾರೆ.

ಅಗ್ನಿಶಾಮಕ ಅಧಿಕಾರಿಗಳು ಬೆಂಕಿಯನ್ನು ನಂದಿಸಿ ಕಾರ್ಖಾನೆಗೆ ದಾರಿ ಮಾಡಿಕೊಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಸುಮಾರು ಶೇ. 30 ರಷ್ಟು ಬೆಂಕಿಯನ್ನು ಮಾತ್ರ ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಟಾ ಪುರಸಭೆಯ ಸಹಾಯಕ ಅಗ್ನಿಶಾಮಕ ಅಧಿಕಾರಿ ದೇವೆಂದರ್ ಗೌತಮ್ ಅವರು ತಿಳಿಸಿದ್ದಾರೆ.



Read more