
ಆರೋಗ್ಯ ಸಚಿವ ಡಾ.ಕೆ. ಸುಧಾಕರ್
ಬೆಂಗಳೂರು: ಜನವರಿ 3 ರಿಂದ 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಪ್ರಧಾನಿ ನರೇಂದ್ರ ಮೋದಿ ಅವರ ಸಮಯೋಚಿತ ನಿರ್ಧಾರದಿಂದ ಕೊರೋನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ಓಮಿಕ್ರಾನ್ ರೂಪಾಂತರಿ ಕಂಡುಬಂದಿರುವ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಯೋಚಿತ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ: ಜ. 3ರಿಂದ 15-18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಿಕೆ ಆರಂಭ, ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್- ಪ್ರಧಾನಿ ಮೋದಿ
ಜನವರಿ 3 ರಿಂದ 15-18 ವಯಸ್ಸಿನ ಮಕ್ಕಳಿಗೆ ಲಸಿಕೆ ಆರಂಭಿಸಲಾಗುವುದು, ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟ ಸಹ -ಅಸ್ವಸ್ಥತೆ ಉಳ್ಳವರಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಒಮಿಕ್ರಾನ್ ರೂಪಾಂತರಿ ಕಂಡುಬಂದಿರುವ ಸಂದರ್ಭದಲ್ಲಿ ಪ್ರಧಾನಿ @narendramodi ಅವರ ಸಮಯೋಚಿತ ನಿರ್ಧಾರ ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ.
ಜನವರಿ 3ರಿಂದ 15-18 ವಯಸ್ಸಿನ ಮಕ್ಕಳಿಗೆ ಲಸಿಕೆ.
ಆರೋಗ್ಯ & ಮುಂಚೂಣಿ ಕಾರ್ಯಕರ್ತರಿಗೆ, 60 ವರ್ಷ ಮೇಲ್ಪಟ್ಟು ಸಹ-ಅಸ್ವಸ್ಥತೆ ಉಳ್ಳವರಿಗೆ ಜನವರಿ 10ರಿಂದ ಬೂಸ್ಟರ್ ಡೋಸ್.
— Dr Sudhakar K (@mla_sudhakar) December 25, 2021