Karnataka news paper

ನಿಶ್ಚಿತಾರ್ಥ ಮಾಡಿಕೊಂಡರೇ ನಟಿ ಅದಿತಿ ಪ್ರಭುದೇವ?


ಬೆಂಗಳೂರು: ಚಂದನವನದ ಬೇಡಿಕೆಯ ನಟಿ ಅದಿತಿ ಪ್ರಭುದೇವ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಅದಿತಿ ಫೋಟೊವನ್ನು ಹಂಚಿಕೊಂಡಿದ್ದಾರೆ. ಫೋಟೊದ ಜತೆಯಲ್ಲಿ ‘ಒಂದು ಕನಸಿನಂತೆ ಈ ಕನಸು ನಿಜವಾಗಿದೆ’ ಎಂದು ಬರೆದುಕೊಂಡಿದ್ದಾರೆ. ಆದರೆ ಅವರು ನಿಶ್ಚಿತಾರ್ಥದ ವಿಷಯವನ್ನು ಹಂಚಿಕೊಂಡಿಲ್ಲ

ಅದಿತಿ, ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಅದರಲ್ಲಿ ಅವರು ಹಾಕಿರುವ ಉಂಗುರ ಹೈಲೈಟ್​ ಆಗಿದೆ. ಈ ಕಾರಣಕ್ಕೆ ಅಭಿಮಾನಿಗಳು ಸೇರಿದಂತೆ ಹಲವರು ಶುಭಾಶಯಗಳನ್ನು ಹೇಳುತ್ತಿದ್ದಾರೆ. ಇದರ ಬಗ್ಗೆ ಅದಿತಿಯ ಆಪ್ತರು, ಗೆಳೆಯರು ಹಾಗೂ ಕುಟುಂಬದವರು ಯಾವುದೇ ಮಾಹಿತಿ ನೀಡಿಲ್ಲ. 

ಓದಿ: 

ಭಾನುವಾರ (ಡಿಸೆಂಬರ್​ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಹುಡುಗ ಉದ್ಯಮಿಯಾಗಿದ್ದು ದಾವಣಗೆರೆ ಮೂಲದವರು ಎನ್ನಲಾಗಿದೆ. 

ಇತ್ತೀಚೆಗೆ ಅದಿತಿ ನಟನೆಯ ‘ಆನ’ ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಅವರ ಇನ್ನು ಎರಡು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. 

ಓದಿ: 





Read More…Source link