ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕೆ. ಸೋಮಶೇಖರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಕೀಲರು ಬುದ್ಧಿವಂತಿಕೆ ಜತೆ ಹೃದಯವಂತರಾಗಿರಬೇಕು. ದ.ಕ. ಸಾಕಷ್ಟು ಹಿರಿಯ ವಕೀಲರನ್ನು ನೀಡಿದೆ. ಸಮಾಜಕ್ಕೆ ಅವರ ಉಪಯೋಗ ಸಾಕಷ್ಟಿದೆ. ಸತ್ಯ ಎಂಬುದು ನ್ಯಾಯಾಧೀಶರ ಕೈಯಲ್ಲಿದೆ. ಅದನ್ನು ಯಾವಾಗಲು ಎತ್ತಿ ಹಿಡಿಯುವಲ್ಲಿ ಪ್ರಯತ್ನಿಸಬೇಕು ಎಂದರು.
ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ಆಧ್ಯಾತ್ಮಿಕ ಬದುಕಿಗೆ ನ್ಯಾಯ ನೀಡಿದವರು ಅಬ್ದುಲ್ ನಜೀರ್ ಅವರು. ಅವರ ಭಾಷಾ ಕಳಕಳಿಯಿಂದ ಪುತ್ತೂರಿನಲ್ಲಿ ಕಟ್ಟಡ ನಿರ್ಮಾಣವಾಗಿದೆ. ಮೂಲ ಸೌಕರ್ಯಗಳ ಜತೆ ನ್ಯಾಯ ನೀಡುವ ಕೆಲಸವನ್ನು ಅವರು ಮಾಡಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್, ಎಸ್. ವಿಶ್ವಜಿತ್ ಶೆಟ್ಟಿ, ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್, ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎಲ್.ಶ್ರೀನಿವಾಸ ಬಾಬು, ರಾಜ್ಯ ವಕೀಲರ ಪರಿಷತ್ ಮಾಜಿ ಅಧ್ಯಕ್ಷ, ಹಿರಿಯ ವಕೀಲ ಪಿ.ಪಿ.ಹೆಗ್ಡೆ, ಶಿವಮೊಗ್ಗ ಲೋಕೋಪಯೋಗಿ ಇಲಾಖೆ ಕೇಂದ್ರ ವಲಯದ ಮುಖ್ಯ ಅಭಿಯಂತರ ಕಾಂತರಾಜ್ ಟಿ.ಟಿ. ಉಪಸ್ಥಿತರಿದ್ದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮುರಳೀಧರ ಪೈ ಬಿ. ಸ್ವಾಗತಿಸಿದರು. ವಕೀಲರ ಸಂಘದ ಅಧ್ಯಕ್ಷ ಮನೋಹರ ಕೆ.ವಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಮಂಜುನಾಥ ಎನ್.ಎಸ್. ವಂದಿಸಿದರು. ಹಿರಿಯ ವಕೀಲ, ಕಾರ್ಯಕ್ರಮ ಸಂಯೋಜಕ ಕೆ.ಆರ್.ಆಚಾರ್ಯ, ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಕಾರ್ಯಕ್ರಮ ನಿರೂಪಿಸಿದರು. ರಾಜೇಶ್ವರಿ ಮತ್ತು ತಂಡದವರು ನಾಡಗೀತೆ ಹಾಡಿದರು.