The New Indian Express
ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 2,479 ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿರುವುದನ್ನು ಆರೋಗ್ಯ ಸಚಿವ ಡಾ.ಸುಧಾಕರ್ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇಂದಿನ 04/01/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/O485aK6JZ8 @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/21XZfKAdDd
— K’taka Health Dept (@DHFWKA) January 4, 2022
ಬೆಂಗಳೂರು ಒಂದರಲ್ಲೇ 2,053 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವಿಟಿ ದರ ಶೇ.2.59 ಕ್ಕೆ ಏರಿಕೆಯಾಗಿದ್ದು, ಕೋವಿಡ್-19 ನಿಂದ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 38,355ಕ್ಕೆ ಏರಿಕೆಯಾಗಿದೆ. ಇನ್ನು ಇಂದು 288 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ವರೆಗೂ 2961410 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕು ಹೆಚ್ಚಳವಾಗಿರುವ ಪರಿಣಾಮ ಸಕ್ರಿಯ ಪ್ರಕರಣಗಳ ಸಂಖ್ಯೆ 13532 ಕ್ಕೆ ಏರಿಕೆಯಾಗಿದೆ. ಕಳೆದ ವರ್ಷ ಜುಲೈ 29 ರಂದು ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 2 ಸಾವಿರದ ಗಡಿಯನ್ನು ದಾಟಿದ್ದವು.
ಆರೋಗ್ಯ ಸಚಿವರು ನೀಡಿರುವ ಮಾಹಿತಿಯ ಪ್ರಕಾರ ಇಂದು ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಹೊಸದಾಗಿ ಪತ್ತೆಯಾಗಿಲ್ಲ. ರಾಜ್ಯಾದ್ಯಂತ ಕೋವಿಡ್-19 ಸೋಂಕು ಹೆಚ್ಚು ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವು ಕಠಿಣ ನಿರ್ಬಂಧಗಳು ಜಾರಿಗೊಳ್ಳುವ ಸಾಧ್ಯತೆ ಇದೆ.
Positivity rate shoots up to 2.59% in Karnataka with 2,479 new cases reported today:
◾New cases in State:2,479
◾New cases in B’lore: 2,053
◾Positivity rate: 2.59%
◾New Omicron cases today: 00
◾Total Omicron cases: 77
◾Deaths:04
◾Tests: 95,391#Covid_19 @BSBommai— Dr Sudhakar K (@mla_sudhakar) January 4, 2022
ಬೆಂಗಳೂರು ಸೇರಿದಂತೆ ಕೊರೋನಾ ಹೆಚ್ಚಳವಾಗುತ್ತಿರುವ ಪ್ರದೇಶಗಳಲ್ಲಿ ಸೋಂಕು ತಡೆಗೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ನಿರ್ಧರಿಸಲು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಆರೋಗ್ಯ ಸಚಿವರು, ಹಿರಿಯ ಕ್ಯಾಬಿನೆಟ್ ಸಹೋದ್ಯೋಗಿಗಳು ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ಸಭೆ ನಡೆಯಲಿದೆ. ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ, ಮೈಕ್ರೋ ಕಂಟೈನ್ಮೆಂಟ್ ಝೋನ್, ಶಾಲೆ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
Data shows us that cases are doubling every 2-3 days in Karnataka!
While the Government is working on containment measures for the new wave, appeal to everyone to strictly follow 3Ms:
Mask up
Maintain social distance
Maintain hand hygiene#COVID19 #Omicron #Karnataka pic.twitter.com/uaMEYQH9wz— Dr Sudhakar K (@mla_sudhakar) January 4, 2022
Read more
[wpas_products keywords=”deal of the day”]