Karnataka news paper

ಉತ್ತರಾಖಂಡ್: ಹರೀಶ್ ರಾವತ್ ರ‍್ಯಾಲಿಯಲ್ಲಿ ಚಾಕು ಹಿಡಿದು ವೇದಿಕೆ ಮೇಲೆರಿದ ವ್ಯಕ್ತಿಯ ಬಂಧನ


PTI

ಡೆಹ್ರಾಡೂನ್: ಉತ್ತರಾಖಂಡ್ ರಾಜ್ಯದ ಉದ್ದಮ್ ಸಿಂಗ್ ನಗರ ಜಿಲ್ಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಆಯೋಜಿಸಿದ್ದ ರ‍್ಯಾಲಿಯಲ್ಲಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಭಾಷಣ ಮುಗಿದ ನಂತರ ಶ್ರೀರಾಮ್ ಘೋಷಣೆಯೊಂದಿಗೆ ಚಾಕುವಿನೊಂದಿಗೆ ವೇದಿಕೆ ಮೇಲೆರಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ 45 ವರ್ಷದ ಪ್ರತಾಪುರ ನಿವಾಸಿಯಾಗಿದ್ದು, ಜೈ ಶ್ರೀರಾಮ ಎಂದು ಘೋಷಣೆ ಕೂಗದವರಿಗೆ ಚಾಕುವಿನಿಂದ ಇರಿಯುವ ಬೆದರಿಕೆ ಹಾಕಿದ್ದಾಗಿ ಹೆಚ್ಚುವರಿ ಎಸ್ಪಿ ಚಂದ್ರಮೋಹನ್ ಸಿಂಗ್ ತಿಳಿಸಿದ್ದಾರೆ. ಆತನ ಮನಸ್ಥಿತಿ ಸರಿಯಾಗಿ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಆತನನ್ನು ಹಿಡಿದು ಸ್ಥಳೀಯ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಆರೋಪಿ ವಿರುದ್ಧ ಶಸಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ, ತದನಂತರ ಮಾನಸಿಕ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.  ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದು, ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ.



Read more

[wpas_products keywords=”deal of the day”]