Karnataka news paper

ಮೇಕೆದಾಟು ಪಾದಯಾತ್ರೆ: ಜ್ವರದ ಕಾರಣದಿಂದ ಬೆಂಗಳೂರಿಗೆ ಸಿದ್ದರಾಮಯ್ಯ ವಾಪಸ್‌!


ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೇಕೆದಾಟು ಪಾದಯಾತ್ರೆಯನ್ನು ಅರ್ಧಕ್ಕೆ ಮೊಟಕುಗೊಳಿಸಿರುವ ವಿರೋಧ ಪಕ್ಷದ ನಾಯ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಭಾನುವಾರ ಬೆಳಗ್ಗೆ ಕಾವೇರಿ ಸಂಗಮದಲ್ಲಿ ನಡೆದ ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು, ಬಳಿಕ ಪಾದಯಾತ್ರೆಯಲ್ಲೂ ನಡೆದರು.

ಮಧ್ಯಾಹ್ಮದ ವಿಶ್ರಾಂತಿ ಬಳಿಕ ಅವರಿಗೆ ಜ್ವರ ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ವೈದ್ಯರು ವಿಶ್ರಾಂತಿ ಪಡೆದುಕೊಳ್ಳಲು ಸೂಚಿಸಿದರು. ವೈದ್ಯರ ಸೂಚನೆ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದಾರೆ. ಒಟ್ಟು 10 ದಿನಗಳ ಕಾಲ ಮೇಕೆದಾಟು ಪಾದಯಾತ್ರೆ ನಡೆಯಲಿದೆ. ಕೋವಿಡ್ ನಿರ್ಬಂಧದ ನಡುವೆಯೂ ಪಾದಯಾತ್ರೆ ಹಮ್ಮಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಸಚಿವ ಗೋವಿಂದ ಕಾರಜೋಳ ‘ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ಧರಾಮಯ್ಯನವರಿಗೆ ಜ್ವರ ಕಾಣಿಸಿಕೊಂಡಿದ್ದು ನನಗೆ ಕಳವಳ ಆಗಿದೆ.ಸಿದ್ಧರಾಮಯ್ಯನವರೇ ದಯವಿಟ್ಟು ವಿಶ್ರಾಂತಿ ತೆಗೆದುಕೊಳ್ಳಿ.ತಮ್ಮ ಆರೋಗ್ಯ ರಕ್ಷಣೆ ಮಹತ್ವದ್ದು’ ಎಂದು ಟ್ವೀಟ್ ಮಾಡಿದ್ದಾರೆ.

ಮೇಕೆದಾಟು ಪಾದಯಾತ್ರೆ; ಕೋವಿಡ್ ನಿಯಮಾವಳಿ ಮರೆತ ಕಾಂಗ್ರೆಸ್ !

ಪಾದಯಾತ್ರೆ ತಡೆಗೆ ಕಾನೂನು ಕ್ರಮದ ಅಸ್ತ್ರ ಪ್ರಯೋಗಕ್ಕೆ ಸರ್ಕಾರ ತೀರ್ಮಾನ

ಮೇಕೆದಾಟು ಜಲಾಶಯ ಅನುಷ್ಠಾನಕ್ಕೆ ಒತ್ತಾಯಿಸಿ ಪಾದಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ಗೆ ಕಾನೂನು ಕ್ರಮದ ಮೂಲಕ ಉತ್ತರ ನೀಡಲು ಬಿಜೆಪಿ ಸರ್ಕಾರ ತೀರ್ಮಾನಿಸಿದೆ. ಕಾಂಗ್ರೆಸ್ ಪಾದಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಂಡು ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ್ದಾರೆ ಇದಕ್ಕೆ ಸೂಕ್ತ ಕಾನೂನು ಕ್ರಮದ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವರ ಸಭೆಯಲ್ಲಿ ನಿರ್ಧರಿಸಲಾಗಿದೆ.

ಪಾದಯಾತ್ರೆಯನ್ನು ನೇರವಾಗಿ ತಡೆಯದೆ ನಿಯಮ ಉಲ್ಲಂಘನೆಯ ವಿರುದ್ಧ ಪ್ರಕರಣದ ದಾಖಲು ಮಾಡುವ ಮೂಲಕ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ. ಮತ್ತೊಂದು ಕಡೆಯಲ್ಲಿ ಕಾಂಗ್ರೆಸ್ ಆರೋಪಕ್ಕೆ ಸೂಕ್ತ ರೀತಿಯಲ್ಲಿ ಪ್ರತ್ಯುತ್ತರ ನೀಡಲು ಸಿಎಂ ಬೊಮ್ಮಾಯಿ ಸಚಿವರಿಗೆ ಸೂಚನೆ ನೀಡಿದ್ದಾರೆ.



Read more

[wpas_products keywords=”deal of the day sale today offer all”]