ಹೈಲೈಟ್ಸ್:
- ಭಾರತ-ದಕ್ಷಿಣ ಆಫ್ರಿಕಾ ನಡುವಣ 3 ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿ.
- ಜನವರಿ 19ರಂದು ಪಾರ್ಲ್‌ನಲ್ಲಿ ನಡೆಯಲಿರುವ ಮೊದಲ ಒಡಿಐ ಪಂದ್ಯ.
- ಕೋವಿಡ್-19 ಸೋಂಕಿಗೆ ತುತ್ತಾಗಿರುವ ವಾಷಿಂಗ್ಟನ್ ಸುಂದರ್ ಸರಣಿಗೆ ಅಲಭ್ಯ.
ತಮಿಳುನಾಡು ಮೂಲದ 22 ವರ್ಷದ ಪ್ರತಿಭಾನ್ವಿತ ಆಲ್‌ರೌಂಡರ್ ಗಾಯಾಳು ರವೀಂದ್ರ ಜಡೇಜಾ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗೆ ಆಯ್ಕೆಯಾಗಿದ್ದರು. ಆದರೆ, ಕೋವಿಡ್-19 ಸೋಂಕಿಗೆ ತುತ್ತಾಗಿರುವ ಕಾರಣ ಅವರು ಈ ಸರಣಿಯಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಇತ್ತೀಚಿನ ವರದಿಗಳು ಹೇಳಿವೆ.
ಒಡಿಐ ಸರಣಿಗೆ ಆಯ್ಕೆ ಆಗಿರುವ ಟೀಮ್ ಇಂಡಿಯಾ ಸದಸ್ಯರು ಸದ್ಯ ಮುಂಬೈನಲ್ಲಿ ಬೀಡುಬಿಟ್ಟಿದ್ದಾರೆ. ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ವಾಷಿಂಗ್ಟನ್ ಸುಂದರ್ ಸದ್ಯ ಬೆಂಗಳೂರಿನಲ್ಲಿದ್ದಾರೆ. ಭಾರತ ತಂಡ ಇನ್ನೆರಡು ದಿನಗಳಲ್ಲಿ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಲಿದೆ.
ಐಪಿಎಲ್ 2022: ಅಹ್ಮದಾಬಾದ್ ತಂಡಕ್ಕೆ ಹಾರ್ದಿಕ್ ಪಾಂಡ್ಯ ಕ್ಯಾಪ್ಟನ್!
“ವಾಷಿಂಗ್ಟನ್ ಸುಂದರ್ ಅವರ ಕೋವಿಡ್-19 ವರದಲ್ಲಿ ವಾಸಿಟಿವ್ ಫಲಿತಾಂಶ ಬಂದಿದೆ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಆಯ್ಕೆ ಆಗಿರುವ ಆಟಗಾರರು ಸದ್ಯ ಮುಂಬೈನಲ್ಲಿದ್ದು, ವಾಷಿಂಗ್ಟನ್ ಈಗ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್‌ಸಿಎ) ಇದ್ದಾರೆ. ಅಲ್ಲಿ ಅವರ ಕೋವಿಡ್-19 ವರದಿ ಪಾಸಿಟಿವ್ ಬಂದಿದೆ,” ಎಂದು ಬಿಸಿಸಿಐ ಮೂಲಗಳು ಮಾಹಿತಿ ನೀಡಿವೆ.
ಒಡಿಐ ಸರಣಿಗೆ ಆಯ್ಕೆ ಆಗಹಿರುವ ಆಟಗಾರರ ಜೊತೆಗೆ ವಾಷಿಂಗ್ಟನ್ ಅವರನ್ನು ಕಳಹಿಸಲಾಗುವುದಿಲ್ಲ. ಅವರನ್ನು ಸರಣಿಯಲ್ಲಿ ಪಾಲ್ಗೊಳ್ಳುವಂತೆ ಮಾಡಿದರೂ ಪ್ರತ್ಯೇಕವಾಗಿ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸುವಂತೆ ಮಾಡಲಾಗುತ್ತದೆ. ನಂತರ ದಕ್ಷಿಣ ಆಫ್ರಿಕಾದಲ್ಲೇ ಕ್ವಾರಂಟೈನ್‌ಗೆ ಒಳಪಡಿಸಿ ತಂಡಕ್ಕೆ ಸೇರಿಸುವ ಪ್ರಯತ್ನ ಮಾಡಲಾಗುವುದು ಎಂದು ಮೂಲಗಳು ಹೇಳಿವೆ.
ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯ ಪಾರ್ಲ್‌ನಲ್ಲಿ ಜನವರಿ 19ರಂದು ಜರುಗಲಿದೆ. ಎರಡನೇ ಪಂದ್ಯಕ್ಕೆ ಜ.21ರಂದು ಅದೇ ಕ್ರೀಡಾಂಗಣ ಆತಿಥ್ಯ ವಹಿಸಿದ್ದು, ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯ ಕೇಪ್ ಟೌನ್‌ನಲ್ಲಿ ಜ.23ರಂದು ಜರುಗಲಿದೆ.
ಐಪಿಎಲ್ 2022: ಅಹ್ಮದಾಬಾದ್ ತಂಡಕ್ಕೆ ಆಶಿಶ್ ನೆಹ್ರಾ ಮುಖ್ಯ ಕೋಚ್!
ಇಂಗ್ಲೆಂಡ್ ಪ್ರವಾಸದ ವೇಳೆ ಗಾಯ
ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದ ವಾಷಿಂಗ್ಟನ್ ಸುಂದರ್, ಕಳೆದ ಇಂಗ್ಲೆಂಡ್ ಪ್ರವಾಸದಲ್ಲಿ ಸರಣಿ ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಕೈಬೆರಳು ಮುರಿದುಕೊಂಡು ತಂಡದಿಂದ ಹೊರಗುಳಿದಿದ್ದರು. ಬಳಿಕ ವಿಜಯ್ ಹಝಾರೆ ಟ್ರೋಫಿ ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಟೂರ್ನಿಗಳಲ್ಲಿ ತಮಿಳುನಾಡು ತಂಡದ ಪರ ಆಡುವ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡಿದ್ದರು. ಟಿ20 ಟೂರ್ನಿ ಗೆದ್ದ ತಮಿಳುನಾಡು ತಂಡ ಒಡಿಐ ಟೂರ್ನಿಯಲ್ಲಿ ರನ್ನರ್ಸ್‌ಅಪ್ ಸ್ಥಾನ ಪಡೆದಿತ್ತು.
ದಕ್ಷಿಣ ಆಫ್ರಿಕಾ ವಿರುದ್ಧದ ಒಡಿಐ ಸರಣಿಗೆ ಭಾರತ ತಂಡ ಹೀಗಿದೆ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್/ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ವೆಂಕಟೇಶ್ ಅಯ್ಯರ್, ಅಕ್ಷರ್ ಪಟೇಲ್, ಶಾರ್ದುಲ್ ಠಾಕೂರ್, ಜಸ್‌ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಆರ್ ಅಶ್ವಿನ್, ಯುಜ್ವೇಂದ್ರ ಚಹಲ್.
ಏಕದಿನ ಕ್ರಿಕೆಟ್ ಸರಣಿ
- ಪ್ರಥಮ ಒಡಿಐ: ಜನವರಿ 19, ಪಾರ್ಲ್
- ದ್ವಿತೀಯ ಒಡಿಐ: ಜನವರಿ 21, ಪಾರ್ಲ್
- ತೃತೀಯ ಒಡಿಐ: ಜನವರಿ 23, ಕೇಪ್ ಟೌನ್
Read more
[wpas_products keywords=”deal of the day gym”]