ಬಾಲಿವುಡ್ನ ಸ್ಟಾರ್ ನಟ ವರುಣ್ ಧವನ್ ಅವರ ಕಾರು ಚಾಲಕ ಮನೋಜ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಗಳವಾರ ಅವರಿಗೆ ಹೃದಯಾಘಾತವಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ಅವರು ಮೃತರಾದರು ಎಂದು ವರುಣ್ ಧವನ್ ಅವರ ಮ್ಯಾನೇಜರ್ ತಿಳಿಸಿದ್ದಾರೆ.
ಮನೋಜ್ ಬಹಳ ವರ್ಷಗಳಿಂದ ವರುಣ್ ಧವನ್ ಜೊತೆಯಲ್ಲಿ ಇದ್ದರು. ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ವರುಣ್ ಧವನ್ ಅವರ ಕುಟುಂಬಕ್ಕೆ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ.
ನಿನ್ನೆ ವರುಣ್ ಧವನ್ ಜಾಹೀರಾತು ಚಿತ್ರೀಕರಣಕ್ಕೆ ತೆರಳಿದ್ದರು. ಶೂಟಿಂಗ್ ಮಾಡುತ್ತಿರುವಾಗ ಮನೋಜ್ಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶೂಟಿಂಗ್ ಮೊಟಕುಗೊಳಿಸಿ ವರುಣ್ ಆಸ್ಪತ್ರೆಗೆ ತೆರಳಿದ್ದರು ಎಂದು ವರುಣ್ ಮ್ಯಾನೇಜರ್ ಹೇಳಿದ್ದಾರೆ.
ಮನೋಜ್ ನಿಧನಕ್ಕೆ ವರುಣ್ ಧವನ್ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ಸೂಚಿಸಿದ್ದಾರೆ.
ಅನೇಕ ಹಿಟ್ ಸಿನಿಮಾಗಳನ್ನು ನೀಡಿರುವ ವರುಣ್ ಧವನ್ ಸದ್ಯ ‘ಭೇಡಿಯಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
Read More…Source link
[wpas_products keywords=”deal of the day party wear for men wedding shirt”]