
ಹೌದು, ಶೀಯೋಮಿ ಕಂಪೆನಿ ಭಾರತದಲ್ಲಿ ಹೊಸ ಶಿಯೋಮಿ 11T ಪ್ರೊ ಸ್ಮಾರ್ಟ್ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್ಫೋನ್ 6.67 ಇಂಚಿನ ಫ್ಲಾಟ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇನ್ನು ಈ ಡಿಸ್ಪ್ಲೇ 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, 108 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಮುಖ್ಯ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್ಪ್ಲೇ ರಚನೆ ಮತ್ತು ವಿನ್ಯಾಸ
ಶಿಯೋಮಿ 11T ಪ್ರೊ 5G ಸ್ಮಾರ್ಟ್ಫೋನ್ 1,080×2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್ಡಿ+ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 120Hz ಡೈನಾಮಿಕ್ ರಿಫ್ರೆಶ್ ರೇಟ್ ಹೊಂದಿದ್ದು, 10-ಬಿಟ್ ಟ್ರೂಲಿ ಕಲರ್ ಫ್ಲಾಟ್ ಅಮೋಲೆಡ್ ಡಿಸ್ಪ್ಲೇಯನ್ನು ಒಳಗೊಂಡಿದೆ. ಈ ಡಿಸ್ಪ್ಲೇ ಡಾಲ್ಬಿ ವಿಷನ್ ಬೆಂಬಲಿಸಲಿದ್ದು, 480Hz ವರೆಗೆ ಟಚ್ ಸ್ಯಾಂಪ್ಲಿಂಗ್ ರೇಟ್ ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಹೊಂದಿದೆ.

ಪ್ರೊಸೆಸರ್ ಯಾವುದು?
ಶಿಯೋಮಿ 11T ಪ್ರೊ 5G ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 888 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಜೊತೆಗೆ 3GB ವರ್ಚುವಲ್ RAM ವಿಸ್ತರಣೆಗೆ ಸಹ ಬೆಂಬಲಿಸಲಿದೆ.

ಕ್ಯಾಮೆರಾ ವಿಶೇಷ
ಶಿಯೋಮಿ 11T ಪ್ರೊ 5G ಸ್ಮಾರ್ಟ್ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್ಸಂಗ್ HM2 ಸೆನ್ಸಾರ್ f/1.75 ವೈಡ್-ಆಂಗಲ್ ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಎಫ್/2.2 ಲೆನ್ಸ್ 120 ಡಿಗ್ರಿಗಳ ಫೀಲ್ಡ್-ಆಫ್-ವ್ಯೂ (FoV) ಹೊಂದಿದೆ. ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಟೆಲಿಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್ನಲ್ಲಿ ಟೈಮ್-ಲ್ಯಾಪ್ಸ್, ಸಿನಿಮಾಟಿಕ್ ಫಿಲ್ಟರ್ಗಳು ಮತ್ತು ಆಡಿಯೊ ಜೂಮ್ನಂತಹ 50 ಕ್ಕೂ ಹೆಚ್ಚು ಡೈರೆಕ್ಟರ್ ಮೋಡ್ಗಳೊಂದಿಗೆ ಪ್ರೀ ಲೋಡ್ ಆಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಶಿಯೋಮಿ 11T ಪ್ರೊ 5G ಸ್ಮಾರ್ಟ್ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ಹೈಪರ್ಚಾರ್ಜ್ ವೇಗದ ವೈರ್ಡ್ ಚಾರ್ಜಿಂಗ್ನೊಂದಿಗೆ ಬರುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್, GPS/ A-GPS/ NavIC, NFC, ಇನ್ಫ್ರಾರೆಡ್ (IR) ಬ್ಲಾಸ್ಟರ್, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಬ್ಯಾರೋಮೀಟರ್, ಗೈರೊಸ್ಕೋಪ್, ಮ್ಯಾಗ್ನೆಟಿಕ್ ದಿಕ್ಸೂಚಿ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಸೇರಿವೆ.

ಬೆಲೆ ಮತ್ತು ಲಭ್ಯತೆ
ಶಿಯೋಮಿ 11T ಪ್ರೊ ಸ್ಮಾರ್ಟ್ಫೋನ್ ಭಾರತದಲ್ಲಿ 8GB RAM ಮತ್ತು 128GB ಸ್ಟೋರೇಜ್ ರೂಪಾಂತರಕ್ಕೆ 39,999ರೂ.ಬೆಲೆ ಹೊಂದಿದೆ. ಇನ್ನು 8GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 41,999ರೂ. ಬೆಲೆ ಹೊಂದಿದ್ದು, 12GB RAM ಮತ್ತು 256GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 43,999ರೂ.ಬೆಲೆ ಹೊಂದಿದೆ. ಇದಲ್ಲದೆ CIti ಬ್ಯಾಂಕ್ ಕ್ರೆಡಿಟ್ ಕಾರ್ಡ್ಗಳು ಮತ್ತು EMI ವಹಿವಾಟುಗಳನ್ನು ಬಳಸಿಕೊಂಡು ಗ್ರಾಹಕರು 5,000 ರೂಪಾಯಿಗಳವರೆಗೆ ರಿಯಾಯಿತಿಯನ್ನು ಪಡೆಯಬಹುದು. ಇನ್ನು ಈ ಸ್ಮಾರ್ಟ್ಫೋನ್ ಭಾರತದಲ್ಲಿ ಸೆಲೆಸ್ಟಿಯಲ್ ಮ್ಯಾಜಿಕ್, ಮೆಟಿಯೊರೈಟ್ ಗ್ರೇ ಮತ್ತು ಮೂನ್ಲೈಟ್ ವೈಟ್ ಬಣ್ಣಗಳಲ್ಲಿ ಮಾರಾಟವಾಗಲಿದೆ. ಇದು ಅಮೆಜಾನ್, ಮಿ.ಕಾಮ್, ಮಿ ಹೋಮ್ ಸ್ಟೋರ್ಗಳು, ಮಿ ಸ್ಟುಡಿಯೋಸ್ ಮತ್ತು ಇತರ ಆಫ್ಲೈನ್ ರಿಟೇಲ್ ವ್ಯಾಪಾರಿಗಳ ಮೂಲಕ ಖರೀದಿಗೆ ಲಭ್ಯವಿರುತ್ತದೆ.
Read more…
[wpas_products keywords=”smartphones under 15000 6gb ram”]