ಹೈಲೈಟ್ಸ್:
- 1999ರ ಜೂನ್ 24 ರಂದು ಚಿಕ್ಕಮಗಳೂರಿನ ಕಡೂರಿನಲ್ಲಿ ದಂಪತಿಯ ಮದುವೆ ನಡೆದಿತ್ತು
- ಎರಡು ತಿಂಗಳ ಅವಧಿಯಲ್ಲೇ ಪತ್ನಿ ಪತಿಯನ್ನು ತೊರೆದು ತವರು ಮನೆ ಸೇರಿದ್ದರು
- ನಾಲ್ಕು ವರ್ಷಗಳ ಬಳಿಕ ಪತಿ 2003ರಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು
‘ಇಷ್ಟು ವರ್ಷ ಬೇರೆ ಬೇರೆಯಾಗಿರುವ ಈ ಸಂಬಂಧವನ್ನು ಒಗ್ಗೂಡಿಸುವುದರಲ್ಲಿ ಯಾವುದೇ ಅರ್ಥವಿಲ್ಲ’ ಎಂದು ಹಿರಿಯ ನ್ಯಾಯಮೂರ್ತಿ ಬಿ. ವೀರಪ್ಪ ಹಾಗೂ ನ್ಯಾಯಮೂರ್ತಿ ಕೆ. ಎಸ್. ಹೇಮ ಲೇಖಾ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯಪಟ್ಟು, ವಿಚ್ಛೇದನಕ್ಕೆ ಅನುಮತಿ ನೀಡಿದೆ.
ಹಿಂದೂ ವಿವಾಹ ಕಾಯಿದೆ – 1955 ರ ಸೆಕ್ಷನ್ 13 (1) (ಜಿಬಿ) ಅಡಿ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಗೊಳಿಸಿದ್ದ ತರೀಕೆರೆಯ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿ, ದಂಪತಿಗೆ ಬೇರ್ಪಡಲು ಅವಕಾಶ ನೀಡಿದೆ.
‘ಪತಿಗೆ 56 ವರ್ಷ ವಯಸ್ಸಾಗಿದೆ. ಇಬ್ಬರೂ 21 ವರ್ಷಗಳಿಂದ ಪ್ರತ್ಯೇಕವಾಗಿ ವಾಸವಿದ್ದಾರೆ. ಈ ಅವಧಿಯಲ್ಲಿ ದಂಪತಿಯಲ್ಲಿ ಯಾರೊಬ್ಬರೂ ತಮ್ಮ ವೈವಾಹಿಕ ಹಕ್ಕುಗಳ ಪುನರ್ ಸ್ಥಾಪನೆಗೆ ಪ್ರಯತ್ನಿಸಿಲ್ಲ. ವಿಚ್ಛೇದನ ಬೇಡ ಎನ್ನುತ್ತಿರುವ ಪತ್ನಿ ಕೂಡ ತಮ್ಮ ವೈವಾಹಿಕ ಹಕ್ಕು ಪುನರ್ ಸ್ಥಾಪನೆ ಕೋರಿಲ್ಲ. ಬದಲಿಗೆ, ಜೀವನಾಂಶಕ್ಕೆ ಅರ್ಜಿ ಸಲ್ಲಿಸಿದ್ದು, 20 ಸಾವಿರ ಜೀವನಾಂಶ ಪಡೆಯುತ್ತಿದ್ದಾರೆ’ ಎಂದು ನ್ಯಾಯಪೀಠ ಹೇಳಿದೆ. ಪತಿ ತನ್ನ ವಿಚ್ಛೇದಿತ ಪತ್ನಿಗೆ ನಾಲ್ಕು ತಿಂಗಳಲ್ಲಿ 30 ಲಕ್ಷ ರೂ. ಜೀವನಾಂಶ ನೀಡುವಂತೆಯೂ ನಿರ್ದೇಶನ ನೀಡಿದೆ.
1999ರ ಜೂನ್ 24 ರಂದು ಚಿಕ್ಕಮಗಳೂರಿನ ಕಡೂರಿನಲ್ಲಿ ದಂಪತಿಯ ಮದುವೆ ನಡೆದಿತ್ತು. ಎರಡು ತಿಂಗಳ ಅವಧಿಯಲ್ಲೇ ಪತ್ನಿ ಪತಿಯನ್ನು ತೊರೆದು ತವರು ಮನೆ ಸೇರಿದ್ದರು. ನಾಲ್ಕು ವರ್ಷಗಳ ಬಳಿಕ ಪತಿ 2003ರಲ್ಲಿ ವಿಚ್ಛೇದನ ಕೋರಿ ತರೀಕೆರೆಯ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಪತಿ ಅರ್ಜಿ ಸಲ್ಲಿಸಿದ್ದಾಗ ಪತ್ನಿ ಯಾವುದೇ ಆಕ್ಷೇಪಣೆ ಎತ್ತಿರಲಿಲ್ಲ. ಹಾಗಾಗಿ, ವಿಚಾರಣಾ ನ್ಯಾಯಾಲಯ 2004ರಲ್ಲಿ ವಿಚ್ಛೇದನ ನೀಡಿ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಪತ್ನಿ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚ್ಛೇದನ ಆದೇಶ ರದ್ದುಗೊಳಿಸಿತ್ತು.
Read more
[wpas_products keywords=”deal of the day sale today offer all”]