Karnataka news paper

ಬಳ್ಳಾರಿ ವಿಮ್ಸ್‌ನಲ್ಲಿ ಹೆಚ್ಚುತ್ತಿದೆ ಕೊರೊನಾ ಕೇಸ್: ಹೊರ ರೋಗಿಗಳಿಗೆ ಚಿಕಿತ್ಸೆ ಬಂದ್‌..!


ಹೈಲೈಟ್ಸ್‌:

  • ವಿಮ್ಸ್‌ನಲ್ಲಿ ತುರ್ತು ಚಿಕಿತ್ಸೆಗಳಿಗೆ ಮಾತ್ರ ಅವಕಾಶ
  • ಹೊರ ರೋಗಿಗಳ ಚಿಕಿತ್ಸೆ ಸ್ಥಗಿತದಿಂದ ರೋಗಿಗಳ ಪರದಾಟ
  • ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಿರುವ ರೋಗಿಗಳು

ಬಳ್ಳಾರಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಲು ಕಾರಣಗಳ ಪೈಕಿ ಒಂದಾಗಿದ್ದ ವಿಮ್ಸ್‌ನಲ್ಲಿ ಈಗ ಹೊರ ರೋಗಿಗಳ ಚಿಕಿತ್ಸೆ ಬಂದ್‌ ಮಾಡಿದ್ದು, ಜಿಲ್ಲೆ ಸೇರಿದಂತೆ ನಾನಾ ಜಿಲ್ಲೆಗಳ ರೋಗಿಗಳು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ವಿಮ್ಸ್‌ನಲ್ಲಿ ಬಳ್ಳಾರಿ ಜಿಲ್ಲೆ ಸೇರಿದಂತೆ ಕೊಪ್ಪಳ, ರಾಯಚೂರು, ವಿಜಯನಗರ ಹಾಗೂ ಆಂಧ್ರದ ಗಡಿ ಭಾಗದಿಂದ ನಿತ್ಯ ಸಾವಿರಾರು ರೋಗಿಗಳು ಚಿಕಿತ್ಸೆಗಾಗಿ ಅವಲಂಬಿತರಾಗಿದ್ದಾರೆ. ಆದರೆ, ಇತ್ತೀಚಿಗೆ ವಿಮ್ಸ್‌ನಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬೆಳಕಿಗೆ ಬರುತ್ತಿದ್ದು, ಇದರಿಂದ ವೈದ್ಯರು, ಸಿಬ್ಬಂದಿ ಸೋಂಕಿನಿಂದ ಬಳಲುವಂತಾಗಿದೆ. ಹೀಗಾಗಿ, ವಿಮ್ಸ್‌ನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಆಸ್ಪತ್ರೆಯಲ್ಲಿ ಸೋಂಕು ನಿಯಂತ್ರಣಕ್ಕಾಗಿ ಹೊರ ರೋಗಿಗಳ ತುರ್ತು ಚಿಕಿತ್ಸೆಯನ್ನು ಹೊರತುಪಡಿಸಿ, ಉಳಿದ ಎಲ್ಲ ಚಿಕಿತ್ಸಾ ಸೇವೆಯನ್ನು ಸ್ಥಗಿತಗೊಳಿಸಿ ವಿಮ್ಸ್‌ ನಿರ್ದೇಶಕರು ಆದೇಶ ಹೊರಡಿಸಿದ್ದು, ಈಗ ಹೊರರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ತುರ್ತು ಚಿಕಿತ್ಸಾ ಘಟಕದಲ್ಲಿ ನಿರಂತರ ಸೇವೆ: ವಿಮ್ಸ್‌ನಲ್ಲಿ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸೋಂಕು ನಿಯಂತ್ರಿಸಲು ಎಲ್ಲ ಚಿಕಿತ್ಸೆ ಸೇವೆಯನ್ನು ಸ್ಥಗಿತಗೊಳಿಸಿ, ತುರ್ತು ಚಿಕಿತ್ಸಾ ಘಟಕಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಇದರಿಂದ ಸಣ್ಣ ಹಾಗೂ ಸಾಮಾನ್ಯ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ಹೋಗುವ ಪರಿಸ್ಥಿತಿ ಜನ ಸಾಮಾನ್ಯರದ್ದಾಗಿದೆ. ಮಧ್ಯಮ, ಬಡವರು ಹಾಗೂ ನಾನಾ ಹಳ್ಳಿಗಳಿಂದ ಆಗಮಿಸಿ ವಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಆದರೆ ಈ ದಿಢೀರ್‌ ಆದೇಶದಿಂದ ರೋಗಿಗಳು ಸಣ್ಣ ಕಾಯಿಲೆಗೆ ಕೂಡ ದುಬಾರಿ ಹಣ ನೀಡಿ ಚಿಕಿತ್ಸೆ ಪಡೆಯಬೇಕು ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ.

ಗಣಿ ನಾಡಲ್ಲಿ ಕೊರೊನಾ ಸೋಂಕು ಉಲ್ಬಣ: ಕಾರ್ಖಾನೆಗಳಿಂದಲೇ ಬಳ್ಳಾರಿಗೆ ಆಪತ್ತು..?
ಖಾಸಗಿ ಆಸ್ಪತ್ರೆಗಳಲ್ಲಿ ತುಂಬಿದ ರೋಗಿಗಳು: ಇತ್ತಿಚೆಗೆ ಜಿಲ್ಲೆಯಲ್ಲಿ ಜ್ವರ, ನೆಗಡಿ, ಕೆಮ್ಮಿನಂತ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಇದರಿಂದ ಸರಕಾರಿ ಆಸ್ಪತ್ರೆಗಳು ಜನ ಸಾಮಾನ್ಯರಿಗೆ ಚಿಕಿತ್ಸೆ ಪಡೆಯಲು ಸಹಕಾರಿಯಾಗಿದ್ದವು. ಆದರೆ, ಈ ಸಂದರ್ಭದಲ್ಲಿ ವಿಮ್ಸ್‌ನಲ್ಲಿ ಕೊರೊನಾ ಸೋಂಕಿನ ನೆಪವೊಡ್ಡಿ ಹೊರ ರೋಗಿಗಳ ಚಿಕಿತ್ಸೆ ಬಂದ್‌ ಮಾಡಿರುವುದು ಅನೇಕರ ಆಕ್ರೋಶಕ್ಕೆ ಸಹ ಕಾರಣವಾಗಿದೆ. ಇದರಿಂದ ಸಣ್ಣ ಪುಟ್ಟ ಚಿಕಿತ್ಸೆಗೆ ಕೂಡ ನಗರದ ನಾನಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ, ಔಷಧಿಗಾಗಿ ರೋಗಿಗಳು ಹೆಚ್ಚಿನ ಹಣವನ್ನು ವ್ಯಯಿಸುವಂತಹ ದುಸ್ಥಿತಿ ಎದುರಾಗಿದೆ.

ನಿಯಂತ್ರಣಕ್ಕೆ ಸಿಗದ ಸೋಂಕು: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಸೋಂಕು ಹತೋಟಿಗೆ ಬಾರದಿರುವುದು ಜಿಲ್ಲಾಡಳಿತದ ನಿದ್ದೆಗೆಡಿಸಿದೆ. ಅದರಲ್ಲೂ ಬಳ್ಳಾರಿ ಹಾಗೂ ಸಂಡೂರು ಪ್ರದೇಶಗಳು ಸದ್ಯ ಸೋಂಕಿನ ಹಾಟ್‌ ಸ್ಟಾಟ್‌ಗಳಾಗಿ ಗುರುತಿಸಿಕೊಂಡಿವೆ. ಅಲ್ಲದೆ, ಇತ್ತೀಚಿಗೆ ಅಂತಾರಾಜ್ಯದಿಂದ ಆಗಮಿಸುವ ಕಾರ್ಮಿಕರು, ಪ್ರವಾಸಿಗರು, ನರ್ಸಿಂಗ್‌ ವಿದ್ಯಾರ್ಥಿಗಳಿಂದ ಸಹ ಸೋಂಕಿತರ ಸಂಖ್ಯೆ ಹೆಚ್ಚಳವಾಗುವುದರೊಂದಿಗೆ ಹರಡುವಿಕೆ ಪ್ರಮಾಣ ಹೆಚ್ಚಾಗಲು ಸಹ ಕಾರಣವಾಗಿದೆ.

ಬಳ್ಳಾರಿಯಲ್ಲಿ ಮಕ್ಕಳನ್ನು ನಡುಗಿಸಿದ ನ್ಯೂಮೋನಿಯಾ..! ಕೊರೊನಾ ಬೆನ್ನಲ್ಲೇ ಮತ್ತೊಂದು ಕಂಟಕ..!
‘ವಿಮ್ಸ್‌ನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಎಲ್ಲ ಚಿಕಿತ್ಸಾ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ತುರ್ತು ಚಿಕಿತ್ಸೆ ಎಂದಿನಂತೆ ನಡೆಯುತ್ತದೆ. ಇದಕ್ಕೆ ಸಾರ್ವಜನಿಕರು ಹಾಗೂ ಜಿಲ್ಲೆಯ ಜನರು ಸಹಕರಿಸಬೇಕು’ ಎಂದು ಬಳ್ಳಾರಿ ವಿಮ್ಸ್‌ ಅಧೀಕ್ಷಕ ಆಶ್ವಿನಿ ಕುಮಾರ ತಿಳಿಸಿದ್ದಾರೆ.

ಬಳ್ಳಾರಿ, ಹೊಸಪೇಟೆ, ನ್ಯೂಮೋನಿಯಾಕ್ಕೆ ನಲುಗಿದ ಕಂದಮ್ಮಗಳು



Read more

[wpas_products keywords=”deal of the day sale today offer all”]