Karnataka news paper

ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಸುತ್ತೋಲೆ: ಶೇ.50ರಷ್ಟು ಹಾಜರಾತಿಗೆ ಅವಕಾಶ ಮುಂದುವರಿಕೆ


Online Desk

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹಾವಳಿ ಹಿನ್ನೆಲೆಯಲ್ಲಿ ಸರ್ಕಾರಿ ಅಧಿಕಾರಿಗಳು ಕಚೇರಿಗಳಿಗೆ ಹಾಜರಾಗುವ ಹಾಗೂ ವಿನಾಯಿತಿ ಪಡೆಯುವ ಕುರಿತಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. 

ಸಚಿವಾಲಯ ಅಧಿಕಾರಿಗಳು ಜನವರಿ 30ರವರೆಗೆ ಶೇಕಡಾ 50ರಷ್ಟು ಹಾಜರಾತಿಗೆ ಅವಕಾಶ ಮುಂದುವರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಸಚಿವಾಲಯದಲ್ಲಿ ಅತ್ಯಗತ್ಯ ಸೇವೆಗಳನ್ನು ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಅಧಿಕಾರಿ ಹಾಗೂ ಸಿಬ್ಬಂದಿ ಒದಗಿಸುತ್ತಿರುವ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಮತ್ತು ಇನ್ನುಳಿದ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್ – ಎ ವೃಂದದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ  ಕಚೇರಿಗೆ ಹಾಜರಾಗತಕ್ಕದ್ದು ಮತ್ತು ಗ್ರೂಪ್ ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ ಮತ್ತು ಸಿಬ್ಬಂದಿ ಶೇಕಡಾ 50ರಂತೆ ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗುವುದು. 

ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ: ಲಾಕ್ಡೌನ್ ಚಿಂತನೆ ಇಲ್ಲ ಎಂದ ಸಿಎಂ ಬೊಮ್ಮಾಯಿ

ಹೀಗೆ ಹಾಜರಾತಿಯಿಂದ ವಿನಾಯಿತಿ ನೀಡಲ್ಪಟ್ಟವರು ಇಲಾಖೆಯ ಕಾರ್ಯದರ್ಶಿಯವರು ಅಥವಾ ಇಲಾಖಾ ಮುಖ್ಯಸ್ಥರು ಇಚ್ಛಿಸಿದಲ್ಲಿ ಅವರು ಬಯಸುವಂತಹ ಅಧಿಕಾರಿ ಹಾಗೂ ನೌಕರರುಗಳು ಯಾವುದೇ ಕಾರಣ ನೀಡದೇ ಕಚೇರಿಗೆ ಹಾಜರಾಗುವುದು. ಕೋವಿಡ್ ಕರ್ತವ್ಯಕ್ಕಾಗಿ ನಿಯೋಜಿಸಿದ್ದ ಅಧಿಕಾರಿ ಹಾಗೂ  ನೌಕರರು ತಪ್ಪದೇ ಹಾಜರಾಗಿ ಕರ್ತವ್ಯ ನಿರ್ವಹಿಸತಕ್ಕದ್ದು.

ದೃಷ್ಟಿಹೀನ ಹಾಗೂ ಇತರೆ ದೈಹಿಕ ಅಂಗವೈಕಲ್ಯ ಹೊಂದಿರುವ ಅಧಿಕಾರಿ ಅಥವಾ ಸಿಬ್ಬಂದಿ ಮತ್ತು ಗರ್ಭಿಣಿಯರು ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ. ಈ ಸುತ್ತೋಲೆಯು 30.01.2022 ರವರೆಗೆ ಅಸ್ತಿತ್ವದಲ್ಲಿರುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.



Read more

[wpas_products keywords=”deal of the day”]