Online Desk
ಕೊರ್ಬಾ: ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಸಲು ಪ್ರತಿಜ್ಞೆ ಕೈಗೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಚತ್ತೀಸ್ ಗಢದ ಕೊರ್ಬಾ ಜಿಲ್ಲೆಯಲ್ಲಿ ಕೆಲವು ಮಂದಿ ವಿರುದ್ಧ ಕೇಸ್ ದಾಖಲಾಗಿದೆ.
ವಿಡಿಯೋ ವೈರಲ್ ಆಗತೊಡಗುತ್ತಿದ್ದಂತೆಯೇ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಪ್ರಮೋದ್ ಅಗರ್ವಾಲ್ ಹಾಗೂ ಇನ್ನೂ ಇತರರು ಪ್ರತಿಜ್ಞೆ ಕೈಗೊಳ್ಳುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ವಿಡಿಯೋದಲ್ಲಿ ಗುರುತಿಸಲಾಗಿರುವ ವ್ಯಕ್ತಿಗಳ ವಿರುದ್ಧ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುತ್ತಿರುವ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಕೊರ್ಬಾ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಧರ್ಮ, ಜನಾಂಗ, ಜನ್ಮದ ಸ್ಥಳ, ವಾಸಿಸುವ ಸ್ಥಳ, ಭಾಷೆಗಳ ಆಧಾರದಲ್ಲಿ ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸುವ ಆರೋಪದಡಿ ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾವು ಕಟ್ಟಾ ಹಿಂದೂಗಳು, ನಾವು ಭಾರತವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ, ಹಿಂದೂಗಳಿಗೆ ಉದ್ಯಮ, ಸಮಾಜ ಹಾಗೂ ಆರ್ಥಿಕ ನೆರವನ್ನು ನೀಡುತ್ತೇವೆ. ನಮ್ಮ ಉದ್ಯಮಗಳಲ್ಲಿ ಹಿಂದೂಗಳನ್ನು ಮಾತ್ರ ನೇಮಕ ಮಾಡಿಕೊಳ್ಳುವ ಮೂಲಕ ಹಿಂದೂ ಸಮಾಜವನ್ನು ಉತ್ತೇಜಿಸುತ್ತೇವೆ” ಎಂದು ವಿಡಿಯೋದಲ್ಲಿರುವ ಮಂದಿ ಪ್ರತಿಜ್ಞೆ ಕೈಗೊಂಡಿದ್ದಾರೆ. ಸಿತಾಮನಿ ಕುನ್ವರ್ ಎಂಬಾತ ಈ ಘಟನೆ ಬಗ್ಗೆ ದೂರು ನೀಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಯಾವುದೇ ಬಂಧನವಾಗಿಲ್ಲ.
Read more
[wpas_products keywords=”deal of the day”]