Avinash Kadesivalaya | Vijaya Karnataka Web | Updated: Jan 27, 2022, 12:44 PM
ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರಾಯಚೂರು ನಗರದ ಪ್ರಮುಖ ರಸ್ತೆಯಲ್ಲಿ ಸಂಚಾರಕ್ಕೆ ತಡೆಯೊಡ್ಡಿ ಹೋರಾಟವನ್ನು ಮಾಡಲಾಗಿದ್ದು, ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗಣರಾಜ್ಯೋತ್ಸವ ಸಮಾರಂಭ ನಡೆಯುತ್ತಿದ್ದ ವೇಳೆ ಭಾರತರತ್ನ ಡಾ.ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಲು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರು ಸೂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದೀಗ ಜಿಲ್ಲಾದ್ಯಂತ ದಲಿತ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ.

ಹೈಲೈಟ್ಸ್:
- ನ್ಯಾಯಾಧೀಶರಿಂದಲೇ ಸಂವಿಧಾನ ಶಿಲ್ಪಿ ಬಿಆರ್ ಅಂಬೇಡ್ಕರ್‌ಗೆ ಅಪಮಾನ ಆರೋಪ
- ರಾಯಚೂರು ನಗರದಲ್ಲಿ ದಲಿತ ಸಂಘಟನೆಗಳಿಂದ ರಸ್ತೆ ಸಂಚಾರ ತಡೆದು ಪ್ರತಿಭಟನೆ
- ಆರೋಪಿತ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ದಲಿತ ಹೋರಾಟಗಾರರು
ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರಾಯಚೂರು ನಗರದ ಪ್ರಮುಖ ರಸ್ತೆಯಲ್ಲಿ ಸಂಚಾರಕ್ಕೆ ತಡೆಯೊಡ್ಡಿ ಹೋರಾಟವನ್ನು ಮಾಡಲಾಗಿದ್ದು, ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಗಣರಾಜ್ಯೋತ್ಸವ ಸಮಾರಂಭ ನಡೆಯುತ್ತಿದ್ದ ವೇಳೆ ಭಾರತರತ್ನ ಡಾ.ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಲು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರು ಸೂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದೀಗ ಜಿಲ್ಲಾದ್ಯಂತ ದಲಿತ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ.
ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಕಚೇರಿಗೆ ತೆರಳುತ್ತಿದ್ದ ಎಡಿಸಿ ದುರ್ಗೇಶ್ ಅವರ ಕಾರ್ ತಡೆದ ಪ್ರತಿಭಟನಾಕಾರರು, ನಂತರ ತೆರಳಲು ಅವಕಾಶ ಮಾಡಿಕೊಟ್ಟರು. ನಗರದ ಅಂಬೇಡ್ಕರ್ ವೃತ್ತದಲ್ಲಿ ಟೈರ್‌ಗೆ ಬೆಂಕಿಯಿಟ್ಟು ದಲಿತ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಪರಿಸ್ಥಿತಿಯ ಗಂಭೀರತೆ ಅರಿತ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಸಮೀಪದ ನಗರಗಳ ಸುದ್ದಿ
Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್ ಮಾಡಿಕೊಳ್ಳಿ ಹಾಗೂ ರಿಪೋರ್ಟ್ ಕಳಿಸಿ
ಕೀವರ್ಡ್ಸ್
Kannada News from Vijaya Karnataka, TIL Network
Read more
[wpas_products keywords=”deal of the day sale today offer all”]