The New Indian Express
ಬೆಳಗಾವಿ/ಬೆಂಗಳೂರು: ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಸೋಲು ಇನ್ನೂ ಹಲವು ರಾಜಕೀಯ ಮುಖಂಡರನ್ನು ಮರೆಸಿದಂತೆ ಕಾಣುತ್ತಿಲ್ಲ. ಅದರಲ್ಲೂ ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಲವು ಬಿಜೆಪಿ ನಾಯಕರಿಗೆ ತೀರಾ ಕಹಿ ಅನುಭವವನ್ನುಂಟುಮಾಡಿತ್ತು.
ಇತ್ತೀಚೆಗೆ ಬೆಳಗಾವಿಯಲ್ಲಿ ಸಮಾನಮನಸ್ಕ ರಾಜಕೀಯ ನಾಯಕರು ಸೇರಿ ಸಭೆ ನಡೆಸಿ ಅದರಿಂದ ಜಾರಕಿಹೊಳಿ ಬ್ರದರ್ಸ್ ನ್ನು ದೂರವಿಟ್ಟಿದ್ದರು ಎಂದು ಸುದ್ದಿಯಾಗಿತ್ತು. ಇನ್ನೊಂದೆಡೆ ರಾಜ್ಯದಲ್ಲಿ ಪಕ್ಷಾಂತರ ಪರ್ವ ಆರಂಭವಾಗುವ ಸೂಚನೆಗಳು ದೊರೆಯುತ್ತಿದ್ದು, ಮತ್ತೆ ಆಪರೇಷನ್ ಕಮಲ ನಡೆಯುವ ಸಾಧ್ಯತೆಯಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಇತ್ತೀಚೆಗೆ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ್ದರು. ಮುಂದಿನ ಬಾರಿ ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ಮತ್ತೆ ಸಚಿವರಾಗುವ ಉಮೇದಿನಲ್ಲಿ ಕೂಡ ಇದ್ದಾರೆ.
ಮುಖ್ಯಮಂತ್ರಿ ಭೇಟಿ-ದೂರು: ಆದರೆ ಬೆಳಗಾವಿಯ ಸ್ಥಳೀಯ ಬಿಜೆಪಿ ನಾಯಕರಲ್ಲಿ ಎಲ್ಲವೂ ಸರಿಯಿಲ್ಲ, ಒಗ್ಗಟ್ಟು ಇಲ್ಲ ಎಂಬುದು ಸಾಬೀತಾಗಿದೆ. ಇಂದು ಬೆಳಗಾವಿಯ ಸ್ಥಳೀಯ ಶಾಸಕರು ಮಧ್ಯಾಹ್ನ 2 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ವಿರುದ್ಧ ದೂರು ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಜಾರಕಿಹೊಳಿಗೆ ಇತರ ಪಕ್ಷಗಳ ಎಷ್ಟು ಮಂದಿ ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರುವಷ್ಟು ಶಕ್ತಿ ಇದೆ: ಗೋವಿಂದ ಕಾರಜೋಳ
ಇತ್ತೀಚಿನ ವಿಧಾನ ಪರಿಷತ್ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಈ ಜಾರಕಿಹೊಳಿ ಸೋದರರೇ ಕಾರಣ ಎಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ದೂರು ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನು ಮುಖ್ಯಮಂತ್ರಿಗಳು ಯಾವ ರೀತಿ ನಿಭಾಯಿಸುತ್ತಾರೆ. ಮುಂದಿನ ದಿನಗಳಲ್ಲಿ ಬೆಳಗಾವಿ ಬಿಜೆಪಿಯಲ್ಲಿ ಏನೇನು ಬೆಳವಣಿಗೆಗಳಾಗಲಿದೆ ಎಂಬುದು ಕುತೂಹಲ.
Read more
[wpas_products keywords=”deal of the day”]