The New Indian Express
ಬೆಂಗಳೂರು: ಆರು ತಿಂಗಳು ಪೂರೈಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ತನ್ನ ಸಾಧನೆಗಳ ಕಿರುಪುಸ್ತಕವೊಂದನ್ನು ಬಿಡುಗಡೆ ಮಾಡಿದ್ದು, ಪುಸ್ತಕ ಬದಲಿಗೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದೆ.
ಕಾಂಗ್ರೆಸ್ಸಿನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಶೀಘ್ರದಲ್ಲೇ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಅಧಿಕಾರ ಸ್ವೀಕರಿಸಲಿದ್ದು, ಸರ್ಕಾರದ ಕಾರ್ಯ ವೈಖರಿ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ.
ಕಳೆದ ಆರು ತಿಂಗಳ ಸರ್ಕಾರದ ಸಾಧನೆಯ ಬಗ್ಗೆ ನಿಮ್ಮ ಅಭಿಪ್ರಾಯವೇನು?
ಇಲ್ಲಿಯವರೆಗೂ ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳುವಲ್ಲಿ ಕಾರ್ಯ ನಿರತರಾಗಿದ್ದಾರೆ. ರಾಜ್ಯದಲ್ಲಿ ಆಡಳಿತ ಕುಸಿದಿದ್ದು, ಮಂತ್ರಿಗಳು ಮುಖ್ಯಮಂತ್ರಿಗಳ ಮಾತು ಕೇಳುತ್ತಿಲ್ಲ. ಅತಿವೃಷ್ಟಿ, ಪ್ರವಾಹ ಮತ್ತು ಭೂಕುಸಿತವನ್ನು ಎದುರಿಸುತ್ತಿರುವ ರಾಜ್ಯದ ಬಗ್ಗೆ ಅವರಿಗೆ ಕಾಳಜಿಯಿಲ್ಲ. ರಸ್ತೆಗಳು ಹಾಳಾಗಿದ್ದು, ಈ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಏನನ್ನೂ ಮಾಡಿಲ್ಲ.
ತಕ್ಷಣದ ಹದಗೆಟ್ಟಿರುವ ರಸ್ತೆಗಳ ಬಗ್ಗೆ ಗಮನ ಹರಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದರು, ಆದರೆ ಸರ್ಕಾರ ಆ ನಿಟ್ಟಿನಲ್ಲಿ ವಿಫಲವಾಗಿದೆ. ವಿಧಾನಸೌಧದ ಸುತ್ತಲಿನ ರಸ್ತೆಗಳನ್ನು ದುರಸ್ತಿ ಮಾಡುವುದೊಂದೇ ಸರ್ವಸ್ವ ಎಂದು ಅವರು ಭಾವಿಸಿದರೆ ಅದು ಸರಿಯಲ್ಲ! ಆರೋಗ್ಯ, ಶಿಕ್ಷಣ ಮತ್ತು ಇತರ ಕ್ಷೇತ್ರಗಳಲ್ಲಿ ಮತ್ತು ಯುವಜನರಿಗೆ ಉದ್ಯೋಗ ಸೃಷ್ಟಿಯಲ್ಲಿ ಸರ್ಕಾರವು ತೋರಿಸಿರುವ ಕಾಳಜಿ ಕಡಿಮೆ. ಸರ್ಕಾರ ಎಷ್ಟು ಜನರಿಗೆ ಉದ್ಯೋಗ ಸಿಕ್ಕಿದೆ ಎಂಬ ಅಂಕಿಅಂಶಗಳನ್ನು ನೀಡಬೇಕು. ಕಳೆದ ಆರು ತಿಂಗಳ ಸರ್ಕಾರದ ಸಾಧನೆಯ ಬಗ್ಗೆ ನಮಗೆ ಶ್ವೇತಪತ್ರ ಬೇಕು. ಕೇವಲ ಹೇಳಿಕೆಗಳು ಮತ್ತು ಜಾಹೀರಾತುಗಳನ್ನು ನೀಡುವುದ ಕೂಡಲೇ ಎಲ್ಲವೂ ಸರಿಯಿದೆ ಎಂದು ಅರ್ಥವಲ್ಲ. ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸಲಾದ ಹಲವು ಗಂಭೀರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರ ವಿಫಲವಾಗಿವೆ.
ಆ ಗಂಭೀರ ಸಮಸ್ಯೆಗಳು ಯಾವುವು?
ಪ್ರವಾಹ, ಕಾನೂನು ಮತ್ತು ಸುವ್ಯವಸ್ಥೆ, ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದಾಳಿಗಳು, ನೈತಿಕ ಪೊಲೀಸ್ ಗಿರಿ ಸೇರದಂತೆ ಸಾಕಷ್ಟು ವಿಚಾರಗಳ ಪ್ರಸ್ತಾಪಿಸಿದ್ದೇವೆ. ನಿಜವಾದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲು ಸರ್ಕಾರ ಸಿದ್ಧವಿರಲಿಲ್ಲ.
ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ರಾಜ್ಯ ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿಮ್ಮ ಹೊಸ ಜವಾಬ್ದಾರಿಯನ್ನು ಹೇಗೆ ನಿರ್ವಹಿಸುತ್ತೀರಿ?
ನಮ್ಮದು ರಚನಾತ್ಮಕ ಪ್ರತಿಪಕ್ಷ. ಸರ್ಕಾರ ಜನಪರ ಕಾರ್ಯಕ್ರಮಗಳನ್ನು ತಂದರೆ ನಾವು ಅದನ್ನು ಬೆಂಬಲಿಸುತ್ತೇವೆ. ಆದರೆ, ಅವರು ಜನವಿರೋಧಿ ಮಸೂದೆಗಳು ಅಥವಾ ಕಾರ್ಯಕ್ರಮಗಳನ್ನು ತಂದರೆ ನಾವು ವಿರೋಧಿಸುತ್ತೇವೆ. ಸರ್ಕಾರ ಜನರಿಗಾಗಿ, ರಾಜ್ಯಕ್ಕಾಗಿ ಕೆಲಸ ಮಾಡಬೇಕೇ ಹೊರತು ಕೆಲವು ಸಂಘಟನೆಗಳಿಗಾಗಿ ಅಲ್ಲ. ಜನವಿರೋಧಿ ನೀತಿಗಳನ್ನು ಕಾಂಗ್ರೆಸ್ ವಿರೋಧಿಸುತ್ತಲೇ ಇರುತ್ತದೆ. ಪರಿಷತ್ತಿನಲ್ಲೂ ಜೆಡಿಎಸ್ ಜೊತೆ ಉತ್ತಮ ಹೊಂದಾಣಿಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತೇವೆ,
ಕಳೆದ ಕೆಲವು ದಿನಗಳಿಂದ ಹಲವು ಕಾಂಗ್ರೆಸ್ ನಾಯಕರು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವ ಬಗ್ಗೆ ಹಲವು ಬಿಜೆಪಿ ನಾಯಕರು ಮಾತನಾಡಿದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯ?
ಇದೊಂದು ದಿಕ್ಕು ತಪ್ಪಿಸುವ ತಂತ್ರ. ಹಲವು ಗಂಭೀರ ವಿಷಯಗಳ ಬಗ್ಗೆ ಗಮನಹರಿಸಬೇಕಿದ್ದು, ರಾಜಕೀಯಕ್ಕೆ ಮಾತ್ರ ಸೀಮಿತವಾಗದೆ ರಾಜ್ಯದ ಅಭಿವೃದ್ಧಿಗೆ ಒತ್ತು ನೀಡಬೇಕು. ಅವರಿಗೆ ತಮ್ಮ ಪಕ್ಷದ ಬಗ್ಗೆ ಅಷ್ಟೊಂದು ವಿಶ್ವಾಸವಿದ್ದರೆ ಬೇರೆ ರಾಜಕೀಯ ಪಕ್ಷಗಳ ಜನರು ತಮ್ಮೊಂದಿಗೆ ಸೇರಿಕೊಳ್ಳುವ ಬಗ್ಗೆ ಏಕೆ ಮಾತನಾಡುತ್ತಿದ್ದಾರೆ?
ಇದನ್ನೂ ಓದಿ: ಆರು ತಿಂಗಳು ಪೂರ್ಣಗೊಳಿಸಿದ ಬೊಮ್ಮಾಯಿ ಸರ್ಕಾರಕ್ಕೆ, ಆರು ಪ್ರಶ್ನೆ ಕೇಳಿದ ಕಾಂಗ್ರೆಸ್
ಮೇಕೆದಾಟು ಪಾದಯಾತ್ರೆ ಕೈಗೆತ್ತಿಕೊಂಡ ಕಾಂಗ್ರೆಸ್ ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳುವ ಕುರಿತು ಕಾಳಜಿ ತೋರುತ್ತಿಲ್ಲ ಎಂಬುದು ಹಲವರ ಅಭಿಪ್ರಾಯ. ಈ ಬಗ್ಗೆ ನಿಮ್ಮ ಅಭಿಪ್ರಾಯ?
ಕರ್ನಾಟಕವನ್ನು ಉತ್ತರ ಮತ್ತು ದಕ್ಷಿಣದ ಪರಿಭಾಷೆಯಲ್ಲಿ ವಿಭಜಿಸಲು ಬಯಸುವ ಜನರು ಅದನ್ನು ಒಂದು ಸಾಧನವಾಗಿ ನೋಡುತ್ತಿದ್ದಾರೆ. ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವುಗಳ ಕುರಿತು ನಾವು ಧ್ವನಿ ಎತ್ತುತ್ತೇವೆ. ಮಹದಾಯಿ ಗಂಭೀರ ಸಮಸ್ಯೆಯಾಗಿದ್ದು, ಆ ಕುರಿತಂತೆಯೂ ಪ್ರತಿಭಟನೆ ನಡೆಸುತ್ತೇವೆ.
ಇಡೀ ಬೆಳಗಾವಿ ಅಧಿವೇಶನ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತಾಗಿತ್ತು. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಹೆಚ್ಚಿನ ಬೆಂಬಲ ನೀಡಬೇಕಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಕಲಂ 371(ಜೆ) ಅಡಿಯಲ್ಲಿ ವಿಶೇಷ ಸ್ಥಾನಮಾನ ನೀಡಿದ್ದರು. ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿದ್ದು, ಅದಕ್ಕೆ ಸಮಯ ಬೇಕಾಗುತ್ತದೆ. ಕಾಂಗ್ರೆಸ್ ಪಕ್ಷ ಅಥವಾ ಆ ನಿಟ್ಟಿನಲ್ಲಿ ಯಾರೇ ಆಗಲಿ ದಕ್ಷಿಣ, ಉತ್ತರ ಅಥವಾ ಕರಾವಳಿ ಎಂಬ ತಾರತಮ್ಯ ಮಾಡಬಾರದು. ನಾವೆಲ್ಲರೂ ಒಂದೇ. ಎಲ್ಲಾ ಪ್ರದೇಶಗಳಿಗೆ ಸಂಬಂಧಿಸಿದ ಸಮಸ್ಯೆಗಳತ್ತ ಗಮನಹರಿಸಬೇಕು. ಅದನ್ನು ನಾವು ಮುಂದುವರೆಸುತ್ತೇವೆ.
ನೀವು ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದೀರಿ. ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಭವಿಷ್ಯವನ್ನು ಹೇಗೆ ನೋಡುತ್ತೀರಿ?
ಗೋವಾ, ಪಂಜಾಬ್ ಮತ್ತು ಉತ್ತರಾಖಂಡದಲ್ಲಿ ನಾವು ಸರ್ಕಾರ ರಚಿಸಲಿದ್ದೇವೆ. ಮಣಿಪುರದಲ್ಲಿ ನಾವು ಬಿಜೆಪಿಗಿಂತ ಮುಂದಿದ್ದೇವೆ ಎಂದು ನಾನು ಭಾವಿಸುತ್ತೇನೆ.
ಇದನ್ನೂ ಓದಿ: ಚಾಮುಂಡೇಶ್ವರಿ ಜನರು ಕೈ ಹಿಡಿಯಲಿಲ್ಲ, ಬಾದಾಮಿಯಲ್ಲಿ ಬೀಳ್ಕೊಡಲು ಸಜ್ಜು: ನೀವು ಸಲ್ಲುವ ಜಾಗ ಯಾವುದು?
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಮೇಲೆ ಈ ಚುನಾವಣಾ ಫಲಿತಾಂಶಗಳ ಪರಿಣಾಮವೇನು?
ಯಾವುದೇ ಪರಿಣಾಮವೂ ಇರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಪತನಗೊಂಡಿದೆ ಮತ್ತು ಎಲ್ಲರೂ ಅಧಿಕಾರದ ಸ್ಥಾನದಲ್ಲಿರಲು ಬಯಸಿದ್ದರಿಂದ ಜನರು ಅವರಿಂದ ಬೇಸತ್ತಿದ್ದಾರೆ. ತಮ್ಮ ವೈಯಕ್ತಿಕ ಹಿತಾಸಕ್ತಿಗಾಗಿ ರಾಜ್ಯದ ಹಿತಾಸಕ್ತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿದ್ದಾರೆ. ಅದು ಸ್ವೀಕಾರಾರ್ಹವಲ್ಲ. ಕರ್ನಾಟಕವು ಉತ್ತಮ ಆಡಳಿತದ ರಾಜ್ಯಗಳಲ್ಲಿ ಒಂದಾಗಿದ್ದು, ಜನರು ಉತ್ತಮ ಆಡಳಿತವನ್ನು ನಿರೀಕ್ಷಿಸುತ್ತಿದ್ದಾರೆಂದು ಹೇಳಿದ್ದಾರೆ.
Read more
[wpas_products keywords=”deal of the day”]