Karnataka news paper

ಉತ್ತರ ಪ್ರದೇಶ: ಕಾನ್ಪುರದಲ್ಲಿ ಭೀಕರ ಸರಣಿ ರಸ್ತೆ ಅಪಘಾತ; 6 ಮಂದಿ ಸಾವು


ANI

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 

ಕಾನ್ಪುರ ನಗರದ ಬಾಬುಪುರ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ತತ್ಮಿಲ್ ಕ್ರಾಸ್‌ರೋಡ್‌ನಲ್ಲಿ ವೇಗವಾಗಿ ಬಂದ ಎಲೆಕ್ಟ್ರಿಕ್  ಬಸ್ ಪಾದಚಾರಿಗಳಿಗೆ ಗುದ್ದಿದೆ. ಪರಿಣಾಮವಾಗಿ 9 ಮಂದಿ ಗಾಯಗೊಂಡರೆ, ಆರು ಮಂದಿ ಸಾವಿಗೀಡಾಗಿದ್ದಾರೆ.

ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಿಯಂತ್ರಣ ತಪ್ಪಿದ ಎಲೆಕ್ಟ್ರಿಕ್ ಬಸ್ ಟ್ರಾಫಿಕ್ ಬೂತ್ ಮುರಿದು ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಅಲ್ಲದೆ ಸ್ವಿಫ್ಟ್ ಕಾರು, ಎರಡು ಬೈಕ್, ಎರಡು ಸ್ಕೂಟಿ, ಒಂದು ಟೆಂಪೋ, ಒಂದು ಝೆನ್ ಕಾರಿಗೆ ಡಿಕ್ಕಿ ಹೊಡೆದಿದ್ದು, ವಾಹನಗಳು ಜಖಂಗೊಂಡಿವೆ. ಈ ಸರಣಿ ಅಪಘಾತದಲ್ಲಿ ಸಾವಿಗೀಡಾದ 6 ಮಂದಿ ಪೈಕಿ ನಾಲ್ವರನ್ನು ಗುರುತಿಸಲಾಗಿದ್ದು, ಇನ್ನುಳಿದವರ ಗುರುತು ಪತ್ತೆಗೆ ಪೊಲೀಸರು ಯತ್ನಿಸುತ್ತಿದ್ದಾರೆ.

ಅಪಘಾತ ನಡೆದ ಸ್ಥಳದಲ್ಲಿ ಬಸ್ ಚಾಲಕ ಪತ್ತೆಯಾಗಿಲ್ಲ. ಬಸ್ ಚಾಲಕನ ಬಗ್ಗೆ ತಿಳಿದುಕೊಳ್ಳಲು ಪೊಲೀಸರು ಈಗ ಸಂಬಂಧಪಟ್ಟ ಇಲಾಖೆಯನ್ನು ಸಂಪರ್ಕಿಸುತ್ತಿದ್ದಾರೆ. ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
 



Read more

[wpas_products keywords=”deal of the day”]