Online Desk
ಬೆಂಗಳೂರು: ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಬುಧವಾರ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಹಿಜಾಬ್ ವಿವಾದ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ವಿಡಿಯೋವೊಂದನ್ನು ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿರುವ ಅವರು, ಭಾರತದ ಯುವಕರು ಇಬ್ಭಾಗವಾಗುತ್ತಿರುವುದನ್ನು ನೋಡಿ ನನಗೆ ತುಂಬಾ ಬೇಸರವಾಗಿದೆ ಎಂದು ಹೇಳಿದ್ದಾರೆ.
Makes me so sad to see the youth of India divided- pic.twitter.com/eOpFsNjuFl
— Divya Spandana/Ramya (@divyaspandana) February 9, 2022
ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಕಾಲೇಜುಗಳಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ಶಾಲು ಸಂಘರ್ಷ ಹಿಂಸಾಚಾರಕ್ಕೆ ತಿರುಗಿದ್ದು, ಮಂಗಳವಾರ ರಾಜ್ಯದ 18 ಜಿಲ್ಲೆಗಳ 54ಕ್ಕೂ ಹೆಚ್ಚು ಕಾಲೇಜುಗಳಲ್ಲಿ ವಿವಾದ ಭುಗಿಲೆದ್ದಿದ್ದು. ಈ ಪೈಕಿ 4 ಜಿಲ್ಲೆಗಳ 6 ಕಾಲೇಜುಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ವಿದ್ಯಾರ್ಥಿಗಳ ಗುಂಪು ಘರ್ಷಣೆ, ಕಲ್ಲು ತೂರಾಟ ನಡೆಸಿದ್ದರು.
ಇದನ್ನೂ ಓದಿ: Hijab row-ಹಿಜಾಬ್ ವಿವಾದ: ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ರಾಜ್ಯ ಸರ್ಕಾರ, ಹೈಕೋರ್ಟ್ ತೀರ್ಪು ಮೇಲೆ ನಿರ್ಧಾರ
ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಕಾಲೇಜಿನೊಳಗೆ ಪ್ರವೇಶಿಸಿ ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗಿಸಿದ್ದರು. ಹಿಂಸಾಚಾರದ ವೇಳೆ 12ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಬಸ್ ಗಳು ಸೇರಿದಂತೆ 11 ವಾಹನಗಳು ಕಲ್ಲು ತೂರಾಟದಿಂದ ಜಖಂಗೊಂಡಿವೆ ಎಂದು ವರದಿಗಳಿಂದ ತಿಳಿದುಬಂದಿದೆ.
Read more
[wpas_products keywords=”deal of the day”]