Online Desk
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 5,339 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,12,100ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಬರೋಬ್ಬರಿ 48 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 39,495ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕನ್ನಡಪ್ರಭ.ಕಾಮ್ ಯೂಟ್ಯೂಬ್ ಚಾನಲ್ ಗಾಗಿ ಇಲ್ಲಿ ಕ್ಲಿಕ್ಕಿಸಿ
ಬೆಂಗಳೂರಿನಲ್ಲಿ ಇಂದು 2,161 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,64,476ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ 16 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 16,749 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 38,11,615ಕ್ಕೆ ಏರಿಕೆಯಾಗಿದೆ. ಇನ್ನು 60,956 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇ. 4.14ಕ್ಕೆ ಇಳಿಯುವ ಮೂಲಕ ಒಂದಂಕಿಗೆ ಕುಸಿದಿದೆ. ಸಾವಿನ ಪ್ರಮಾಣ ಶೇ. 0.89ರಷ್ಟಿದೆ.
ಇಂದಿನ 09/02/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/kmiGicDP5M @CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/32pged0A6Z
— K’taka Health Dept (@DHFWKA) February 9, 2022
Read more
[wpas_products keywords=”deal of the day”]