The New Indian Express
ಉಡುಪಿ: ಕರ್ನಾಟಕದ ಉಡುಪಿಯ ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ಅಂಗಳ ತಲುಪುತ್ತಿದ್ದಂತೆ ಇತ್ತ ರಾಜ್ಯದಲ್ಲಿ ಅದರಲ್ಲೂ ಕರಾವಳಿ ಭಾಗದಲ್ಲಿ ಕೆಲವು ಮುಸ್ಲಿಂ ಹೆಣ್ಣುಮಕ್ಕಳ ಪೋಷಕರು ತಮ್ಮ ಮಕ್ಕಳಿಗೆ ಕಾಲೇಜಿನಲ್ಲಿ ಹಿಜಾಬ್ ಧರಿಸುವುದಕ್ಕೆ ಅವಕಾಶ ಮಾಡಿಕೊಡಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ. ತರಗತಿಯೊಳಗೆ ಹಿಜಾಬ್ ಧರಿಸುವುದು ಅನಿವಾರ್ಯ ಎಂದು ಹೇಳುತ್ತಿದ್ದಾರೆ.
ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಪದಾಧಿಕಾರಿಗಳಲ್ಲಿ ನಾವು ಸಮಾಲೋಚನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಅಗತ್ಯಬಿದ್ದರೆ ಕಾನೂನು ಹೋರಾಟ ನಡೆಸಲು ನಾವು ಸಿದ್ದರಿದ್ದೇವೆ, ತರಗತಿಯೊಳಗೆ ಹಿಜಾಬ್ ಧರಿಸಲು ನಮ್ಮ ಮಕ್ಕಳಿಗೆ ಕಾಲೇಜಿನಲ್ಲಿ ಅವಕಾಶ ಮಾಡಿಕೊಡಬಹುದಾಗಿತ್ತು ಎಂದು ಪೋಷಕರು ಹೇಳುತ್ತಾರೆ.
ಕಟ್ಟಡ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿರುವ ಯುವತಿಯ ತಂದೆ ಅಲ್ತಫ್, ಹೆಣ್ಣುಮಕ್ಕಳ ಸರ್ಕಾರಿ ಪಿಯು ಕಾಲೇಜಿನಲ್ಲಿ ನನ್ನ ಮಗಳು ಮೊದಲು ಹಿಜಾಬ್ ಧರಿಸುತ್ತಿದ್ದಳು. ಆದರೆ ನಂತರ ಕಳೆದ ವರ್ಷ ಡಿಸೆಂಬರ್ 31ರಂದು ಗಲಾಟೆ ಆರಂಭವಾಯಿತು. ನಾವು ಈ ಬಗ್ಗೆ ಚರ್ಚೆ, ವಾದ ಮಂಡಿಸಬೇಕಿಲ್ಲ, ನಮಗೆ ಹಿಜಾಬ್ ಧರಿಸಲು ಬಿಡಬೇಕಷ್ಟೆ ಎನ್ನುತ್ತಾರೆ.
ಇದನ್ನೂ ಓದಿ: ಹಿಜಾಬ್ ವಿವಾದ: ಪ್ರತಿಭಟನಾ ವಿದ್ಯಾರ್ಥಿನಿಯರ ವೈಯಕ್ತಿಕ ಮಾಹಿತಿ ಹಂಚಿಕೆ, ಪೋಷಕರಿಂದ ದೂರು ದಾಖಲು
ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ನಾಯಕರು ಕೂಡ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಿದ್ದರು. ಆದರೆ ಕಾಲೇಜು ಅಭಿವೃದ್ಧಿ ಸಮಿತಿ ಅನುಮತಿ ನೀಡಲಿಲ್ಲ. ಈಗ ನಡೆದಿರುವುದಕ್ಕೆಲ್ಲಾ ನಾವು ಕಾರಣವಲ್ಲ, ಅದಕ್ಕೆ ಕಾಲೇಜು ಪ್ರಾಂಶುಪಾಲರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ(ಸಿಡಿಸಿ)ಯ ಅಧ್ಯಕ್ಷರೇ ಕಾರಣ ಎನ್ನುತ್ತಾರೆ.
ಒಕ್ಕೂಟ ಅಧ್ಯಕ್ಷ ಇಬ್ರಾಹಿಂ ಸಾಹೆಬ್ ಕೋಟ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿ, ನಾವು ಪೋಷಕರಿಗೆ ಸಲಹೆ ನೀಡುತ್ತೇವೆ ಎಂದರು. ಇನ್ನೊಬ್ಬ ಪೋಷಕರು ಆರು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರ ಫೋಟೋ, ವಿಳಾಸ, ಫೋನ್ ನಂಬರ್ ಮತ್ತು ಇತರ ವೈಯಕ್ತಿಕ ವಿವರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಅವರು ಮೊನ್ನೆ ಗುರುವಾರ ಉಡುಪಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ವಿಷ್ಣುವರ್ಧನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೆ ಮಾಡಿದ ವಿವರಗಳ ಬಗ್ಗೆ ಮಾಹಿತಿ ಕೇಳಿದ್ದೇನೆ. ಅವರು ಮಾಹಿತಿ ನೀಡಿದ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದ್ದಾರೆ.
Read more
[wpas_products keywords=”deal of the day”]