The New Indian Express
ಬೆಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಎಂಜಿಎನ್ಆರ್ಇಜಿಎ) ಅನುಷ್ಠಾನಕ್ಕೆ ಅಗತ್ಯವಿರುವ ಅನುದಾನವನ್ನು ರಾಜ್ಯ ಸರ್ಕಾರ ಪಡೆಯುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಸಚಿವ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಯೋಜನೆಗಳಿಗೆ ಕೇಂದ್ರ ಬಜೆಟ್ ನಲ್ಲಿ ಅನುದಾನ ಕಡಿತ ಮಾಡಿರುವುದು ರಾಜ್ಯದ ಕಾರ್ಯಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.
ಮನ್ರೇಗಾ ಮತ್ತು ಜಲ ಜೀವನ್ ಮಿಷನ್ ಸೇರಿದಂತೆ ಇಲಾಖೆಯು ಎಲ್ಲಾ ಯೋಜನೆಗಳಿಗೆ ಕೇಂದ್ರ ಮತ್ತು ರಾಜ್ಯದಿಂದ ಸಾಕಷ್ಟು ಅನುದಾನವನ್ನು ಪಡೆಯುತ್ತಿದೆ. ಅನುದಾನ ಪಡೆಯುವಿಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ನಮ್ಮ ಮನವಿಯಂತೆ ಎಲ್ಲಾ ಯೋಜನೆಗಳಿಗೆ ಕೇಂದ್ರವು ಅನುದಾನ ಬಿಡುಗಡೆ ಮಾಡುತ್ತಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಇನ್ನೂ ಒಂದು ವರ್ಷ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆ ಅನುಮಾನ: ಸಚಿವ ಈಶ್ವರಪ್ಪ
ಬಜೆಟ್ನಲ್ಲಿ ಮನ್ರೇಗಾ ಯೋಜನೆಗೆ ಶೇಕಡಾ 25 ರಷ್ಟು ಅನುದಾನ ಕಡಿತಗೊಳಿಸಿದ್ದಕ್ಕಾಗಿ ಪ್ರತಿಪಕ್ಷ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಈ ಹಿಂದೆ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೆ, ಯೋಜನೆಯ ಅನುಷ್ಠಾನದ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ಅವರು, ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 32.41 ಲಕ್ಷ ಕುಟುಂಬಗಳ 60.87 ಲಕ್ಷ ಜನರಿಗೆ ಉದ್ಯೋಗ ನೀಡಲಾಗಿದೆ. 30.05 ಲಕ್ಷ ಮಹಿಳೆಯರು, 5.80 ಲಕ್ಷ ಹಿರಿಯ ನಾಗರಿಕರಿಗೆ ಮತ್ತು 22,400 ಲಕ್ಷಕ್ಕೂ ಹೆಚ್ಚು ವಿಶೇಷ ಚೇತನರು ಸೇರಿ ಒಟ್ಟು 4,064 ಕೋಟಿ ರೂ.ಕೂಲಿ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಈ ವರ್ಷ ದಾಖಲೆಯ 13.61 ಲಕ್ಷ ಕಾಮಗಾರಿ ತೆಗೆದುಕೊಂಡು ಈಗಾಗಲೇ 4.31 ಲಕ್ಷ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 13 ಕೋಟಿ ಮಾನವ ದಿನಗಳಷ್ಟು ಉದ್ಯೋಗ ಸೃಜನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿತ್ತು. 2021ರ ಡಿಸೆಂಬರ್ ತಿಂಗಳಲ್ಲೇ ಈ ಗುರಿಯನ್ನು ಸಾಧಿಸಲಾಗಿತ್ತು ಎಂದು ತಿಳಿಸಿದರು.
ಹೆಚ್ಚುವರಿಯಾಗಿ 1.40 ಕೋಟಿ ಮಾನವ ದಿನಗಳ ಸೃಜನೆಗೆ 715 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಈ ಗುರಿಯನ್ನೂ ಶೀಘ್ರದಲ್ಲಿ ಸಾಧಿಸಲಾಗುವುದು. ಉದ್ಯೋಗ ಖಾತರಿ ಯೋಜನೆಯಡಿ ಈ ವರ್ಷ 32.41 ಲಕ್ಷ ಕುಟುಂಬಗಳ 60.87 ಲಕ್ಷ ಜನರಿಗೆ ಉದ್ಯೋಗ ನೀಡಲಾಗಿದೆ. ಖಾತರಿ ಯೋಜನೆಯಡಿ 13.61 ಲಕ್ಷ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, 4.3 ಲಕ್ಷ ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಹೇಳಿದರು.
ಜಲ ಶಕ್ತಿ ಅಭಿಯಾನದ ಅಡಿಯಲ್ಲಿ 8.92 ಲಕ್ಷ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, 4.87 ಲಕ್ಷ ಕಾಮಗಾರಿಗಳು ಪೂರ್ಣಗೊಂಡಿವೆ. ಉದ್ಯೋಗ ಖಾತ್ರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅನುದಾನದಲ್ಲಿ ಆರು ವರ್ಷಗಳ ಅವಧಿಯಲ್ಲಿ 3,275 ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. ಈ ಪೈಕಿ 2,335 ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು.
Read more
[wpas_products keywords=”deal of the day”]